ಬೀದರ್: ಹೃದಯಾಘಾತ, ರಸ್ತೆ ಅಪಘಾತ ಹಾಗೂ ಇತರ ತುರ್ತು ಸಂದರ್ಭಗಳಲ್ಲಿ ಪ್ರಾಣಾಪಾಯದಲ್ಲಿರುವವರನ್ನು ಹೇಗೆ ರಕ್ಷಿಸಬಹುದು ಎಂಬ ಬಗ್ಗೆ ಬೀದರ್ ಜಿಲ್ಲಾ ಪೊಲೀಸ್ ಅಧಿಕ್ಷಕರ ಕಛೇರಿ ಸಭಾಂಗಣದಲ್ಲಿ ಒಂದು ದಿನದ ತರಬೇತಿ ಶಿಬಿರ ಆಯೋಜಿಸಲಾಗಿತ್ತು.
ಬೀದರದ ಗುದಗೆ ಆಸ್ಪತ್ರೆಯ ವೈದ್ಯರು ERSS-112 ಮತ್ತು ಬೀದರ್ ಜಿಲ್ಲಾ ಹೈವೆ ಮೊಬೈಲ್ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಶಿಬಿರದಲ್ಲಿ ವಿಶೇಷ ತರಬೇತಿ ನೀಡಿದರು.

ಗುದಗೆ ಆಸ್ಪತ್ರೆಯ ಸಂಸ್ಥಾಪಕ ಡಾ.ಚಂದ್ರಕಾಂತ ಗುದಗೆ, ಡಾ.ನಿತೀನ್ ಗುದಗೆ, ಕಾರ್ಡಿಯಾಲೊಜಿಸ್ಟ್ ಡಾ.ಮಹೇಶ ತಮ್ಮ ಸಹದ್ಯೋಗಿಯರೊಂದಿಗೆ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ ತರಬೇತಿಯನ್ನು ನೀಡಿದರು.

ತರಬೇತಿಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹೇಶ ಮೇಘಣ್ಣವರ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಚಂದ್ರಕಾಂತ ಪೂಜಾರಿ, ಮೊಸೀ ಮತ್ತಿತರರು ಭಾಗವಹಿಸಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್


