ಕೆ.ಆರ್.ಪೇಟೆ: ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರೊಂದು ಹಳ್ಳಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮೂವರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಸೇತುವೆ ಬಳಿ ನಿನ್ನೆ ತಡರಾತ್ರಿ ನಡೆದಿದೆ.
ಕೆ.ಆರ್.ಪೇಟೆ ನಿವಾಸಿಗಳಾದ ಅನಿಕೇತನ್ (30), ಪವನ್ ಶೆಟ್ಟಿ (32) ಹಾಗೂ ಚಿರಂಜೀವಿ (32) ಮೃತಪಟ್ಟವರಾಗಿದ್ದಾರೆ.
ಘಟನೆಯಲ್ಲಿ ಸಾಗರ್ ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಕೆ.ಆರ್.ಪೇಟೆಯಿಂದ ಅಕ್ಕಿಹೆಬ್ಬಾಳು ಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


