ಸಕಲೇಶಪುರ: ಕೆಎಸ್ ಆರ್ ಟಿಸಿ ಬಸ್ಸೊಂದು ಶಾಲಾ ಕಾಂಪೌಂಡ್ ಹಾಗೂ ಮನೆಗೆ ಬಸ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದ ಬಳಿ ನಡೆದಿದೆ.
ಉದಯಪುರ ಗ್ರಾಮದ ಅಮೃತ್‌ರಾಜ್ (34) ಮೃತಪಟ್ಟವರಾಗಿದ್ದಾರೆ.. ಘಟನೆಯಲ್ಲಿ 10 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.
ಬೆಂಗಳೂರಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಬಸ್ ಸಕಲೇಶಪುರದ ಬಾಗೆ ಗ್ರಾಮಕ್ಕೆ ತಲುಪುತ್ತಿದ್ದಂತೆ ಬ ಸ್‌ನ ಆಕ್ಸಲ್ ತುಂಡಾಗಿ ರಸ್ತೆ ಪಕ್ಕದ ಜಮೀನಿಗೆ ನುಗ್ಗಿ ಮನೆಗೆ ಡಿಕ್ಕಿಹೊಡೆದು, ಜೆಎಸ್ ಎಸ್ ಶಾಲೆಯ ಕಾಂಪೌಂಡ್ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ.
ಬಸ್ ಡಿಕ್ಕಿ ಹೊಡೆದ ತೀವ್ರತೆಗೆ ಶಾಲೆಯ ಗೋಡೆಯೇ ಕುಸಿದು ಬಿದ್ದಿದೆ. ಬಸ್ ನಲ್ಲಿದ್ದ ಪ್ರಯಾಣಿಕ ಅಮೃತ್‌ರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.


