ಕಲಬುರಗಿ: ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪೋಚಾವರಂನಲ್ಲಿ ಕುಡಿದ ನಶೆಯಲ್ಲಿದ್ದ ಮಗ ಕ್ಷುಲ್ಲಕ ಕಾರಣಕ್ಕೆ ಕಟ್ಟಿಗೆಯಿಂದ ಹೆತ್ತ ತಾಯಿಯನ್ನೇ ಹೊಡೆದು ಕೊಂದ ಘಟನೆ ನಡೆದಿದ್ದು, ಶೋಭಾ(45) ಕೊಲೆಯಾದ ತಾಯಿ. ಅನೀಲ್ ಹೆತ್ತ ತಾಯಿಯನ್ನೇ ಕೊಂದ ಕ್ರೂರಿ ಮಗ.
ಕೊಲೆ ಮಾಡಿದ ಅನಿಲ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಕೊಂಚಾವರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಆರೋಪಿ ಮಗನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.


