ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ನಲ್ಲಿ ಸಂಚರಿಸುತ್ತಿದ್ದ ತಾಯಿ ಮೃತಪಟ್ಟಿದ್ದು ಮಗ ಗಂಬೀರ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕಾಚಹಳ್ಳಿ ಗ್ರಾಮದ ಬಳಿ ನಡೆದಿದೆ.
ಬೈಕ್ಗೆ ಹಿಂಬದಿಯಿಂದ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದ್ದು ಬೈಕ್ ಹಿಂಬದಿ ಕುಳಿತಿದ್ದ ತಾಯಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಮೃತರನ್ನು ನೇತ್ರಾವತಿ ಎಂದು ಗುರುತಿಸಲಾಗಿದೆ. ಮಗ ರಾಜುಗೆ ಗಂಭೀರ ಗಾಯಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.


