ತುಮಕೂರು: ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುಳ್ಳು ಹೇಳುವುದನ್ನೇ ಕರ್ತವ್ಯ ಮಾಡಿಕೊಂಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಒಂದು ಸಮುದಾಯದ ಮತ ಗಟ್ಟಿಮಾಡಿಕೊಳ್ಳಲು ನೀತಿ ರೂಪಿಸುತ್ತಿದ್ದಾರೆ ಎಂದು ಮಾಜಿ ಶಿಕ್ಷಣ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟೀಕಿಸಿದರು.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದ ದುರಾದೃಷ್ಟಕ್ಕೆ ಮಧು ಬಂಗಾರಪ್ಪ ರಾಜ್ಯದ ಶಿಕ್ಷಣ ಸಚಿವರಾಗಿದ್ದು ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ ಎಂದರು.
ರಾಜ್ಯ ಸರ್ಕಾರ ಹೊರಡಿಸಿರುವ ಪರೀಕ್ಷಾ ವೇಳಾಪಟ್ಟಿಯಲ್ಲಿ ವಾರದ ಎಲ್ಲಾ ದಿನ ಬೆಳಗ್ಗೆ 10.30ಕ್ಕೆ ಪರೀಕ್ಷೆ ಆರಂಭವಾದರೆ ಶುಕ್ರವಾರ ಮಾತ್ರ ಮಧ್ಯಾಹ್ನ 2ಕ್ಕೆ ಆರಂಭವಾಗುತ್ತಿರುವುದು ಒಂದು ಸಮುದಾಯದ ఓట్టికగి మితేవాగిటి ఎందరు.
ವಿದ್ಯಾರ್ಥಿಗಳಿಗೆ ನಮಾಜ್‌ಗೆ ಅವಕಾಶ ಮಾಡಿಕೊಟ್ಟಿರುವ ಸರ್ಕಾರ ತಾರತಮ್ಯ ಮಾಡುತ್ತಿದೆ. ಒಂದು ಸಮುದಾಯಕ್ಕೆ ಸೀಮಿತವಾಗಿರುವ ರಾಜ್ಯ ಸರ್ಕಾರ ಒಡೆದು ಆಳುವ ನೀತಿಯನ್ನು ಮುಂದುವರಿಸಿದೆ ಎಂದರು.
ಈಗ ಒಂದು ಸಮುದಾಯದ ಸರ್ಕಾರವಾಗಿದ್ದು ಹಿಂದೂ ವಿರೋಧಿ ನಿರ್ಣಯ ತೆಗೆದುಕೊಳ್ಳುವ ಮೂಲಕ ಸಮಾಜವನ್ನು ಒಡೆಯುವ ಕೆಲಸ ಮಾಡಿದ್ದಾರೆ. ಇದರ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದರು.