ಕಾರವಾರ: ಬೆಂಗಳೂರಿನಿಂದ ಗೋವಾಗೆ ಹೊರಟಿದ್ದ ಸೀಬರ್ಡ್ ಬಸ್ ಪಲ್ಟಿಯಾದ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 63ರ ವಜ್ರಳ್ಳಿ ಬಳಿ ನಡೆದಿದೆ. ಬೆಳಗಿನ ಜಾವ 3:15ಕ್ಕೆ ಸಂಭವಿಸಿದ ಅಪಘಾತದಲ್ಲಿ 8ಕ್ಕೂ ಅಧಿಕ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಆಗಿಲ್ಲ. ಗಾಯಾಳುಗಳನ್ನು ಅಂಕೋಲಾ ತಾಲ್ಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


