ಬೀದರ್: ಕೌಟುಂಬಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕುಶನೂರ ಪೊಲೀಸರು ಮಹಾರಾಷ್ಟ್ರದ ಲಾತೂರದಲ್ಲಿ ಬಂಧಿಸಿದ್ದಾರೆ.
ಪಂಡಿತ್ ಲೋಹರ ಎಂಬವರ ಪುತ್ರ ಅರುಣ ಬಂಧಿತ ಆರೋಪಿಯಾಗಿದ್ದಾನೆ. ಕೌಟುಂಬಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಈತ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತ ಮಹಾರಾಷ್ಟ್ರದ ಲಾತೂರದಲ್ಲಿ ಇರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಎ.ಎಸ್.ಐ. ಅನಿಲ್, ಸಿಪಿಸಿ ಬಾಲಾಜಿ, ಸಿಪಿಸಿ ಸಂಜೀವ ಅವರನ್ನೊಳಗೊಂಡ ಪೊಲೀಸರ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
2014ರಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಸದ್ಯ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊನೆಗೂ ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್


