ತುರುವೇಕೆರೆ: ತಾಲೂಕಿನಾದ್ಯಂತ ಫೆಬ್ರವರಿ 13 ರಿಂದ 18 ರವರೆಗೆ ‘ಸಂವಿಧಾನ ಜಾಗೃತಿ ಜಾಥಾ’ ಬಗ್ಗೆ ಹಾಗೂ ಸಂವಿಧಾನದ ಮಹತ್ವ ಜೊತೆಗೆ ಮುಂದಾಗುವ ಪರಿಣಾಮಗಳ ಬಗ್ಗೆ ಜಾಗ್ರತೆ ಮೂಡಿಸುವ ಕಾರ್ಯಕ್ರಮದ ಹಿನ್ನೆಲೆ ಇಂದು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕಿನ ದಂಡಾಧಿಕಾರಿ ವೈ.ಎಂ. ರೇಣುಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.
ಇದೆ ವೇಳೆ ತಹಶೀಲ್ದಾರ್ ವೈ.ಎಂ. ರೇಣುಕುಮಾರ್ ಮಾತನಾಡಿ, ಇದೇ ತಿಂಗಳು 12ನೇ ತಾರೀಕು ಸಂಜೆ ಸಂವಿಧಾನ ಜಾಗೃತಿ ಜಾಥ ರಥ ನಮ್ಮ ತಾಲೂಕಿಗೆ ಆಗಮಿಸಲಿದ್ದು, ಪ್ರತಿ ಹಳ್ಳಿಗಳ ಜನರಲ್ಲಿ ಕಾನೂನಿನ ಸುವ್ಯವಸ್ಥೆ ಬಗ್ಗೆ ಹಾಗೂ ಸರ್ಕಾರದಿಂದ ಬಂದಂತಹ ಅನುದಾನದ ಉಪಯೋಗ ಬಗ್ಗೆ ಜನರಲ್ಲಿ ಮತ್ತು ಮಕ್ಕಳಿಗೆ ಜಾಗೃತಿ ಮೂಡಿಸುವ ಜಾಥಾ ಇದಾಗಿದ್ದು, ಜನವರಿ 26 ರಂದು ಪ್ರಾರಂಭವಾದ ಈ ಸಂವಿಧಾನ ಜಾಗ್ರತಾ ಜಾಥಾ ಫೆ.26ರಂದು ಬೆಂಗಳೂರು ತಲುಪಲಿದೆ ಎಂದರು.
ನಮ್ಮ ತಾಲೂಕಿಗೆ ಆಗಮಿಸಲಿರುವ ಸಂವಿಧಾನ ಜಾಗೃತಿ ಜಾಥಾ ರಥವನ್ನು ಬಹಳ ವಿಜೃಂಭಣೆಯಿಂದ ಸ್ವಾಗತಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಇದೇ ವೇಳೆ ಅವರು ಕರೆ ನೀಡಿದರು.
ಇನ್ನು ಈ ಸಭೆಯಲ್ಲಿ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು, ಮತ್ತು ವಿವಿಧ ಪರ ಸಂಘಟನೆಗಳು, ಹಾಗೂ ದಲಿತಪರ ಸಂಘಟನೆಯ ಮುಖಂಡರುಗಳು ಭಾಗವಹಿಸಿ ಕಾರ್ಯಕ್ರಮದ ರೂಪರೇಷೆಗಳ ಬಗ್ಗೆ ಚರ್ಚಿಸಲಾಯಿತು.
ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು, ಇನ್ನೂ ಕಾನೂನಿನ ವ್ಯವಸ್ಥೆ ಹಾಗೂ ಸಂವಿಧಾನವನ್ನು ಕಾಪಾಡಲು ಈ ಕಾರ್ಯಕ್ರಮ ಮಾಡಿರುವುದು ನಮ್ಮೆಲ್ಲರಿಗೂ ಸಂತೋಷ ತಂದಿದೆ ಎಂದು ತಾಲೂಕು ದಂಡಾಧಿಕಾರಿ ಹೇಳಿದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


