ಕೋಲಾರ: ಗುಂಪೊಂದು ನಾಲ್ವರ ಮೇಲೆ ಹಲ್ಲೆ ಮಾಡಿರುವ ಘಟನೆ ಕೋಲಾರ ತಾಲೂಕಿನ ಕಾಮದೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಮೀನಿನ ದಾರಿ ವಿಚಾರಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಮನೆಗೆ ನುಗ್ಗಿ ಹಲ್ಲೆ, ಗೃಹೋಪಯೋಗಿ ವಸ್ತು ಧ್ವಂಸಗೊಳಿಸಿದ್ದಾರೆ.
ಅಲ್ಲದೇ ಭೀರಪ್ಪ, ಅಶ್ವತ್ಥ್, ಲಕ್ಷ್ಮಮ್ಮ, ಶಾರದಮ್ಮ ಎಂಬುವರ ಮೇಲೆ ಹಲ್ಲೆ ಮಾಡಿದೆ. ಪ್ರಕಾಶ್, ರಮೇಶ್ ಎಂಬುವರು ಹಲ್ಲೆ ಮಾಡಿಸಿದ್ದಾರೆಂದು ಆರೋಪಿಸಲಾಗಿದ್ದು, ಈ ಬಗ್ಗೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


