ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿರ್ದೇಶಕ ಡಾ.ವಿ. ಲೋಕೇಶ್ ಅವರನ್ನು ವಜಾ ಮಾಡಿದ್ದು, ಡಾ. ಸೈಯದ್ ಅಲ್ತಾಫ್ ಅವರನ್ನು ನೂತನ ನಿರ್ದೇಶಕರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಡಾ.ವಿ. ಲೋಕೇಶ್ ಅವರ ವಿರುದ್ಧ ಅಧಿಕಾರ ದುರ್ಬಳಕೆ, ಅಕ್ರಮ ಸೇವಾ ಬಡ್ತಿ, ವೈದ್ಯಕೀಯ ನಿರ್ಲಕ್ಷ್ಯ ಸೇರಿ ವಿವಿಧ ಆರೋಪಗಳ ಬಗ್ಗೆ ಲೋಕಾಯುಕ್ತಕ್ಕೆ ದೂರು ಬಂದಿದ್ದವು. ಪೆಟ್ ಸ್ಕ್ಯಾನ್ ದರ ನಿಗದಿಗೆ ಸಂಬಂಧಿಸಿದಂತೆ ಹೊರಡಿಸಿದ್ದ ಕಾರ್ಯಾದೇಶ ರದ್ದುಪಡಿಸಿದೆ.


