nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ

    July 14, 2026
    Facebook Twitter Instagram
    ಟ್ರೆಂಡಿಂಗ್
    • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
    • ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
    • ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
    • ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
    • ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
    • ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
    • ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
    • ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಅಚ್ಚರಿ ಉಂಟು ಮಾಡಿದೆ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ February 8, 2024

    ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಅಚ್ಚರಿ ಉಂಟು ಮಾಡಿದೆ: ಸಿಎಂ ಸಿದ್ದರಾಮಯ್ಯ

    By adminFebruary 8, 2024No Comments3 Mins Read
    siddaramaiah

    ಬೆಂಗಳೂರು: ತೆರಿಗೆ ಹಂಚಿಕೆಯೂ ಸೇರಿದಂತೆ ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯವನ್ನು ಪ್ರತಿಭಟಿಸಿ ನಮ್ಮ ಸರ್ಕಾರ ನಡೆಸಿದ್ದ ‘’ದೆಹಲಿ ಚಲೋ’’ ಹೋರಾಟ ದೇಶದ ಏಕತೆ ಮತ್ತು ಭದ್ರತೆಗೆ ಬೆದರಿಕೆ ಒಡ್ಡಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಅಚ್ಚರಿ ಉಂಟು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

    ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ,  ಇದೇ ಮೋದಿಯವರು ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಯುಪಿಎ ಸರ್ಕಾರದ ವಿರುದ್ಧ ಪುಂಖಾನುಪುಂಖವಾಗಿ ನೀಡಿರುವ ಹೇಳಿಕೆಗಳನ್ನು ಅವರ ಗಮನಕ್ಕೆ ತರಬಯಸುತ್ತೇನೆ.

    ಪ್ರಧಾನಿ ನರೇಂದ್ರ ಮೋದಿ ಅವರೇ, ನಿಮ್ಮ ಹೇಳಿಕೆಗಳು ದೇಶದ ಏಕತೆ ಮತ್ತು ಭದ್ರತೆಗೆ ಬೆದರಿಕೆ ಒಡ್ಡಿರಲಿಲ್ಲವೇ? ದಯವಿಟ್ಟು ಉತ್ತರ ಕೊಡಿ.

    ಕೇಂದ್ರ ಹಣಕಾಸು ಆಯೋಗದ ವಿರುದ್ದ ಮೊದಲು ಮಾತನಾಡಿದ್ದೇ ನರೇಂದ್ರ ಮೋದಿ ಅವರು. ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ 2012ರ ಡಿಸೆಂಬರ್ ಆರರಂದು ಹೇಳಿಕೆಯೊಂದನ್ನು ನೀಡಿ ‘’ಗುಜರಾತ್ ರಾಜ್ಯ ಕೇಂದ್ರ ಸರ್ಕಾರಕ್ಕೆ ರೂ.60,000 ಕೋಟಿ ನೀಡುತ್ತಿದೆ, ಇದರಲ್ಲಿ ನಮಗೆ ವಾಪಸ್ ಬಂದದ್ದು ಎಷ್ಟು? ಗುಜರಾತ್ ಭಿಕ್ಷುಕ ರಾಜ್ಯವೇ? ಎಂದು ಪ್ರಶ್ನಿಸಿದ್ದರು.

    2008ರಲ್ಲಿ ವಡೋದರಾದ ಸಮಾರಂಭದಲ್ಲಿ ಮಾತನಾಡುತ್ತಾ ‘ಗುಜರಾತ್ ರಾಜ್ಯ ಪ್ರತಿವರ್ಷ ರೂ.40,000 ಕೋಟಿ ರೂ.ಗಳನ್ನು ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಪಾವತಿಸುತ್ತಿದೆ. ಅದರಲ್ಲಿ ಕೇವಲ ಶೇಕಡಾ 2.5ರಷ್ಟು ಮಾತ್ರ ರಾಜ್ಯಕ್ಕೆ ವಾಪಸು ನೀಡಲಾಗುತ್ತದೆ. ಇಷ್ಟು ಜುಜುಬಿ ಮೊತ್ತವನ್ನು ವಾಪಸು ನೀಡುವ ಬದಲಿಗೆ ಒಂದು ವರ್ಷದ ಅವಧಿಗೆ ನಮ್ಮ ತೆರಿಗೆಯನ್ನು ನಾವೇ ಬಳಸಿಕೊಳ್ಳಲು ಅವಕಾಶ ನೀಡಬಾರದೇಕೆ? ಎಂದು ಕೇಂದ್ರ ಸರ್ಕಾರದ ಅಸ್ತಿತ್ವನ್ನೇ ಪ್ರಶ್ನಿಸಿದ್ದರು.

    ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ 2012ರ ಜನವರಿ ಒಂಭತ್ತರಂದು ನಡೆದಿದ್ದ ಹತ್ತನೇ ಪ್ರವಾಸಿ ಭಾರತೀಯ ಸಮ್ಮೇಳನದಲ್ಲಿ ಮಾತನಾಡುತ್ತಾ ‘ಕೇಂದ್ರ ಸರ್ಕಾರ ಇಲ್ಲವೆ ಪ್ರಧಾನಮಂತ್ರಿಯವರಿಂದ ನಮಗೆ ಚಿಕ್ಕಾಸಿನ ನೆರವು ಸಿಗುತ್ತಿಲ್ಲ. ನಾವು ನಮ್ಮ ಸಂಪನ್ಮೂಲವನ್ನೇ ನೆಚ್ಚಿಕೊಂಡಿದ್ದೇವೆ’ ಎಂದು ವಿದೇಶಿ ಗಣ್ಯರಿದ್ದ ವೇದಿಕೆಯಲ್ಲಿಯೇ ದೂರಿದ್ದರು.

    ಹದಿನಾಲ್ಕನೇ ಹಣಕಾಸು ಆಯೋಗದ ಜೊತೆಗಿನ ಮಾತುಕತೆಯಲ್ಲಿ ಇದೇ ನರೇಂದ್ರ ಮೋದಿಯವರು ‘ಕೇಂದ್ರ ಸರ್ಕಾರ ರಾಜ್ಯದಿಂದ ಸಂಗ್ರಹಿಸುವ ತೆರಿಗೆಯಲ್ಲಿ ಕನಿಷ್ಠ ಶೇಕಡಾ 35ರಿಂದ 50ರ ವರೆಗೆ ರಾಜ್ಯಕ್ಕೆ ಪಾಲು ನೀಡಬೇಕು’ ಎಂದು ವಾದಿಸಿದ್ದರು.

    ‘’ತೆರಿಗೆ ಹಂಚಿಕೆಗೆ ಅನುಸರಿಸಲಾಗುತ್ತಿರುವ ಮಾನದಂಡವನ್ನು ಹಣಕಾಸು ಆಯೋಗ ಬದಲಾವಣೆ ಮಾಡಬೇಕು, ಉತ್ತಮ ರೀತಿಯಲ್ಲಿ ಹಣಕಾಸು ನಿರ್ವಹಣೆ ಮತ್ತು ಅಭಿವೃದ್ದಿ ಕಾರ್ಯಗಳನ್ನು ನಡೆಸುವ ರಾಜ್ಯಗಳಿಗೆ ಹೆಚ್ಚಿನ ಪ್ರೊತ್ಸಾಹ ನೀಡಬೇಕು. ಹಣಕಾಸು ನಿರ್ವಹಣೆಯಲ್ಲಿ ಸೋತಿರುವ ರಾಜ್ಯಗಳಿಗೆ ಹೆಚ್ಚಿನ ಉತ್ತೇಜನ ನೀಡಿ ಉತ್ತಮ ರೀತಿಯಲ್ಲಿ ಹಣಕಾಸು ನಿರ್ವಹಣೆ ಮಾಡುತ್ತಿರುವ ರಾಜ್ಯಗಳನ್ನು ನಿರ್ಲಕ್ಷಿಸುವ ಈಗಿನ ತೆರಿಗೆ ಹಂಚಿಕೆ ವಿಧಾನವನ್ನು ಬದಲಿಸಬೇಕಾಗಿದೆ. ಮೂಲಸೌಕರ್ಯಗಳ ಸುಧಾರಣೆ ಮತ್ತು ದೇಶದ ಅಭಿವೃದ್ದಿಗೆ ಗಣನೀಯ ಕೊಡುಗೆಗಳನ್ನು ನೀಡುವ ರಾಜ್ಯಗಳಿಗೆ ಹೆಚ್ಚಿನ ಉತ್ತೇಜನ ನೀಡಬೇಕು’’ ಎಂದು ಹಣಕಾಸು ಆಯೋಗದ ಮುಂದೆ ವಾದ ಮಾಡಿದ್ದರು. ಇದು ಕೇಂದ್ರ ಸರ್ಕಾರದ ವಿರುದ್ಧದ ನಿಲುವಲ್ಲವೇ?

    ಇದೇ ರೀತಿ ಕೇಂದ್ರ ಸರ್ಕಾರ ತನ್ನನ್ನು ರಕ್ಷಿಸಿಕೊಳ್ಳಲು ಮತ್ತು ವಿರೋಧಿಗಳನ್ನು ಹಣಿಯಲು ಸಿಬಿಐ ಸಂಸ್ಥೆಯನ್ನು ದುರುಪಯೋಗ ಮಾಡುತ್ತಿದೆ ಎಂದು ಗುಜರಾತ್ ಮುಖ್ಯಮಂತ್ರಿಯಾಗಿ ಆರೋಪಿಸುತ್ತಿದ್ದ ನರೇಂದ್ರ ಮೋದಿಯವರು ಈಗ ಸಿಬಿಐ, ಇಡಿ ಮತ್ತು ಆದಾಯ ತೆರಿಗೆ ಇಲಾಖೆಯ ಪ್ರಾಮಾಣಿಕತೆಯನ್ನು ಪ್ರಶ್ನಿಸಿದವರನ್ನು ದೇಶದ್ರೊಹಿಗಳೆಂದು ದೂರುತ್ತಿದ್ದಾರೆ.

    ಯುಪಿಎ ಸರ್ಕಾರ ವಿದೇಶಿ ನೇರ ಬಂಡವಾಳ ಹೂಡಿಕೆಯ ಕಾನೂನನ್ನು ಜಾರಿಗೆ ತಂದಾಗ ಅದನ್ನು ವಿರೋಧಿಸಿದ್ದ ನರೇಂದ್ರ ಮೋದಿಯವರು ‘ಇನ್ನು ಮುಂದೆ ನಿತ್ಯ ಬಳಕೆಯ ಉಪ್ಪು, ಸಾಂಬಾರ ಪದಾರ್ಥಗಳನ್ನೂ ವಿದೇಶಿಯರೇ ಮಾರುತ್ತಾರೆ’ ಎಂದು ವ್ಯಂಗ್ಯವಾಡಿದ್ದರು. ಎಫ್ ಡಿ ಐ ನಿಂದಾಗಿ ದೇಶದ ಸಣ್ಣ ಸಣ್ಣ ಅಂಗಡಿ ಮಾಲೀಕರು ಮತ್ತು ಉತ್ಪಾದನಾ ಕ್ಷೇತ್ರದಲ್ಲಿರುವವರು ನಿರುದ್ಯೋಗಿಗಳಾಗುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದ್ದರು.

    ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯತ್ತಿದ್ದಾಗ ನರೇಂದ್ರ ಮೋದಿಯವರು ‘ಯುಪಿಎ ಸರ್ಕಾರ ಮತ್ತು ರೂಪಾಯಿ ಉರುಳಿ ಕೆಳಗೆ ಬೀಳುವುದರದಲ್ಲಿ ಪೈಪೋಟಿ ನಡೆಸುವಂತಿದೆ’ ಎಂದು ವ್ಯಂಗ್ಯವಾಡಿದ್ದರು.

    ಪೆಟ್ರೋಲ್ ಬೆಲೆ ಏರಿಕೆಯಿಂದಾಗಿ ಗುಜರಾತ್ ಜನ ಬವಣೆ ಪಡುವಂತಾಗಿದೆ ಎಂದು ಗೋಳಿಟ್ಟಿದ್ದ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾದ ನಂತರದ ದಿನಗಳಲ್ಲಿ ಕಚ್ಚಾ ತೈಲದ ಬೆಲೆ ಇಳಿಯುತ್ತಿದ್ದರೂ ಪೆಟ್ರೋಲ್ ಬೆಲೆ ಏರಿಸುತ್ತಲೇ ಹೋದರು. ಇದರಿಂದ ಗುಜರಾತಿಗಳು ಮಾತ್ರವಲ್ಲ ಇಡೀ ದೇಶದ ಜನತೆ ಗೋಳಾಡಬೇಕಾಯಿತು.

    ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಆಧಾರ್ ಗುರುತಿನ ಚೀಟಿಯ ಪ್ರಬಲ ವಿರೋಧಿಯಾಗಿದ್ದ ನರೇಂದ್ರ ಮೋದಿಯವರು ‘ಆಧಾರ್ ಕಾರ್ಡ್ ಗೆ ಭವಿಷ್ಯದ ಮುನ್ನೋಟವೇ ಇಲ್ಲ, ಇದು ಕೇವಲ ರಾಜಕೀಯ ಗಿಮಿಕ್ ಎಂದು ಟೀಕಿಸಿದ್ದರು. ಅದೇ ಮೋದಿಯವರು ಪ್ರಧಾನಿಯಾದ ನಂತರ ತಮ್ಮ ನಿಲುವು ಬದಲಿಸಿ ಆಧಾರ್ ಗುರುತಿನ ಚೀಟಿಯ ಪ್ರಬಲ ಪ್ರತಿಪಾದಕರಾಗಿದ್ದಾರೆ.

    ಇಂತಹ ಹತ್ತಾರು ಯೂ ಟರ್ನ್ ಗಳನ್ನು ನಾನು ಪಟ್ಟಿ ಮಾಡಿಕೊಡಬಹುದು. ಆ ದಿನಗಳಲ್ಲಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದ, ಟೀಕಿಸಿದ್ದ ನರೇಂದ್ರ ಮೋದಿ ಅವರ ಹೇಳಿಕೆಗಳಿಂದ ದೇಶದ ಏಕತೆ ಮತ್ತು ಭದ್ರತೆಗೆ ಎದುರಾಗದ ಬೆದರಿಕೆ ಈಗ ನಮ್ಮ ಪ್ರತಿಭಟನೆಯಿಂದ ಹೇಗೆ ಎದುರಾಯಿತು ಎನ್ನುವುದನ್ನು ಪ್ರಧಾನಿ ನರೇಂದ್ರ ಮೋದಿಯವರೇ ವಿವರಿಸಬೇಕು.

    ಈ ಆತ್ಮವಂಚನೆಯ ನಡವಳಿಕೆಯನ್ನು ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಹೆಚ್.ಡಿ. ಕುಮಾರಸ್ವಾಮಿ ಅವರೂ ಮುಂದುವರಿಸಿದ್ದಾರೆ.

    2022ರ ಡಿಸೆಂಬರ್ ತಿಂಗಳಲ್ಲಿ ವಿಧಾನಸಭೆಯಲ್ಲಿಯೇ ನಾನು ಮಾತನಾಡುತ್ತಾ “15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದಾಗ ಆಗ ಮುಖ್ಯಮಂತ್ರಿಗಳಾಗಿದ್ದ ಬೊಮ್ಮಾಯಿಯವರು ಅನ್ಯಾಯವಾಗಿರುವುದು ನಿಜ ಎಂದು ಒಪ್ಪಿಕೊಂಡಿರುವುದು ಸದನದ ದಾಖಲೆಯಲ್ಲಿದೆ, ಪತ್ರಿಕೆಗಳಲ್ಲಿಯೂ ಪ್ರಕಟವಾಗಿದೆ. ಇದೇ ಬೊಮ್ಮಾಯಿಯವರು ಹಣಕಾಸು ಆಯೋಗದಿಂದ ಅನ್ಯಾಯವೇ ಆಗಿಲ್ಲ ಎಂದು ಕೂಗಾಡುತ್ತಿದ್ದಾರೆ.

    ಇನ್ನೊಬ್ಬರು ಹೆಚ್ ಡಿ.ಕುಮಾರಸ್ವಾಮಿ ಅವರಿಗೆ ಸತ್ಯ ಮಾತನಾಡಿಯೇ ಗೊತ್ತಿಲ್ಲ. ಕೇಂದ್ರ ಸರ್ಕಾರ ತೆರಿಗೆ ಹಂಚಿಕೆ ಮಾಡುವಾಗ ಗುಜರಾತ್ ರಾಜ್ಯಕ್ಕೆ ಹೆಚ್ಚಿನ ಪಾಲು ನೀಡಿ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದ್ದರು. ಈಗ ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದು ಹೇಳುತ್ತಿರುವ ಕುಮಾರಸ್ವಾಮಿ ಗುಜರಾತ್ ರಾಜ್ಯದ ಹೆಸರೇ ಎತ್ತುತ್ತಿಲ್ಲ. ಸುಳ್ಳಿನಲ್ಲಿ ಇವರು ಮೋದಿಯವರ ಜೊತೆಯಲ್ಲಿ ಪೈಪೋಟಿಗಿಳಿದಂತಿದೆ.

     


    Provided by
    Provided by
    admin
    • Website

    Related Posts

    ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ

    July 14, 2026

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ವಿಶ್ವವಿದ್ಯಾನಿಲಯಗಳು ಸಂಖ್ಯೆಯಲ್ಲಿ ವಿಸ್ತರಣೆಯಾಗದೆ ಗುಣಮಟ್ಟದಲ್ಲಿ ಬೆಳೆಯಬೇಕಿದೆ. ಈ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಂಬಂಧ ಯುಜಿಸಿ ಗಮನಹರಿಸಬೇಕಿದೆ…

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ

    July 14, 2026

    ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್

    July 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.