nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026
    Facebook Twitter Instagram
    ಟ್ರೆಂಡಿಂಗ್
    • ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ
    • ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ
    • ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ
    • ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್
    • ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ
    • ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿದೆ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ February 9, 2024

    ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿದೆ: ಸಿಎಂ ಸಿದ್ದರಾಮಯ್ಯ

    By adminFebruary 9, 2024No Comments2 Mins Read
    siddharamayya

    ಕಳೆದ 10 ವರ್ಷಗಳ ಅವಧಿಯಲ್ಲಿ ಕೇಂದ್ರದ ಬಜೆಟ್ ಗಾತ್ರ ಹೆಚ್ಚಾಗಿದ್ದು, ರಾಜ್ಯಕ್ಕೆ ನೀಡುವ ಅನುದಾನದ ಗಾತ್ರವೂ ಹೆಚ್ಚಾಗಬೇಕಾಗಿತ್ತು. ಇದು ರಾಜ್ಯಕ್ಕೆ ಆಗಿರುವ ಅನ್ಯಾಯ. ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಸಂಸದರು ರಾಜ್ಯದ ಹಿತ ಕಾಯುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

    ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿದೆ. 2017-18 ರಿಂದ ಇಲ್ಲಿಯವರೆಗೆ ರಾಜ್ಯದ ಪಾಲಿಗೆ 1.87 ಲಕ್ಷ ಕೋಟಿ ತೆರಿಗೆ ಹಂಚಿಕೆ ಬರದೇ ಅನ್ಯಾಯವಾಗಿದೆ. ರಾಜ್ಯಕ್ಕೆ ಈ ಮಟ್ಟದ ನಷ್ಟವಾಗಿರುವುದನ್ನು ಸರಿಯೆಂದು ಬಿಜೆಪಿಯವರು ಹೇಳುತ್ತಾರೆಯೇ?


    Provided by
    Provided by

    ನಿನ್ನೆಯ ದಿನ ಪ್ರಧಾನಿ ಮೋದಿ ಅವರು ಅಧಿವೇಶನದಲ್ಲಿ ಮಾತನಾಡುತ್ತಾ, ರಾಜ್ಯ ತನ್ನ ಹಕ್ಕಿನ ಬಗ್ಗೆ ಪ್ರಶ್ನಿಸಿರುವುದನ್ನು ದೇಶ ವಿಭಜನೆ ಮಾಡುವ ವಿಷಯ ಎಂದು ವ್ಯಾಖ್ಯಾನಿಸಿದ್ದಾರೆ. ಪ್ರತಿಭಟನೆ ಮಾಡಿದ ರಾಜ್ಯದ ನಡೆಯನ್ನು ಟೀಕಿಸಿದ ಮೋದಿಯವರು, ತಾವು ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ, ಗುಜರಾತ್ ರಾಜ್ಯಕ್ಕೆ ಸಾಕಷ್ಟು ಅನುದಾನ ಹಂಚಿಕೆಯಾಗುತ್ತಿಲ್ಲವೆಂದೂ ಅಂದಿನ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಾ, ‘60 ಸಾವಿರ ಕೋಟಿ ತೆರಿಗೆ ನೀಡುವ ಗುಜರಾತ್ ರಾಜ್ಯಕ್ಕೆ ಅನುದಾನ ಮರಳಿ ಬರುತ್ತಿಲ್ಲ, ಗುಜರಾತ್ ಭಿಕ್ಷೆ ಬೇಡುವ ರಾಜ್ಯವೇ? ಅಥವಾ ನಾವು ಭಿಕ್ಷುಕರೇ, ನಾವು ದೆಹಲಿಯಲ್ಲಿರುವವರ ಕರುಣೆಯ ಮೇಲೆ ಬದುಕಬೇಕೇ?’ಎಂದು ಟ್ವೀಟ್ ಮಾಡಿದ್ದರು.

    ಅಲ್ಲದೇ, 2008 ರಲ್ಲಿ ವಡೋದರಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಗುಜರಾತ್ ರಾಜ್ಯ 40 ಸಾವಿರ ಕೋಟಿ ತೆರಿಗೆ ನೀಡಿದರೂ, ಕೇಂದ್ರದಿಂದ ಕೇವಲ 2.5 ರಷ್ಟು ಅನುದಾನ ಬರುತ್ತಿದೆ. ಇಂತಹ ಕನಿಷ್ಟ ಪ್ರಮಾಣದ ಅನುದಾನ ನೀಡುವ ಬದಲು ಒಂದು ವರ್ಷಗಳ ವರೆಗೆ ಗುಜರಾತ್ ನಿಂದ ತೆರಿಗೆ ಪಡೆಯುವುದನ್ನು ಬಿಟ್ಟುಕೊಡಲಿ’ಎಂದು ಹೇಳಿದ್ದರು. ಈ ರೀತಿ ಮಾತನಾಡಿದ ಮೋದಿಯವರು, ನಾವು ಪ್ರತಿಭಟನೆ ಮಾಡಿದರೆ ಭಾರತವನ್ನು ಒಡೆಯಲಾಗುತ್ತಿದೆ ಎಂದು ಟೀಕಿಸುತ್ತಿದ್ದಾರೆ. ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ತೆರಿಗೆ ಹಂಚಿಕೆ ಬಗ್ಗೆ ಹೇಳಿರುವ ಮಾತಿಗೂ, ಪ್ರಧಾನಿಯಾಗಿ ಈಗ ಹೇಳುತ್ತಿರುವ ಮಾತನಾಡಿರುವ ಮೋದಿಯವರಿಗೆ ಎರಡು ನಾಲಿಗೆಗಳಿವೆಯೇ? ಎರಡು ರೀತಿಯ ಧೋರಣೆ ಹೊಂದಿರುವ ಪ್ರಧಾನಿ ಮೋದಿಯವರ ಮಾತಿಗೆ ಕಿಮ್ಮತ್ತಿರಲು ಸಾಧ್ಯವೇ?  ಎಂದು ಪ್ರಶ್ನಿಸಿದರು.

    ನಾವು ರಾಜ್ಯದ ಹಾಗೂ ಕನ್ನಡಿಗರ ಹಿತರಕ್ಷಣೆ ಮಾಡಲು ನಮ್ಮ ಉದ್ದೇಶವಾಗಿದೆ. ಕರ್ನಾಟಕದಿಂದ 4,30,000 ಕೋಟಿ ತೆರಿಗೆ ಕೇಂದ್ರಕ್ಕೆ ಹೋಗಿದೆ. ಆದರೆ ನಮಗೆ 52,257 ಕೋಟಿ ಮಾತ್ರ ರಾಜ್ಯಕ್ಕೆ ಮರಳಿ ಬರುತ್ತದೆ. ಅಂದರೆ 100 ರೂ. ರಲ್ಲಿ ಕೇವಲ 13 ರೂ. ರಾಜ್ಯಕ್ಕೆ ಬರುತ್ತಿದೆ. ಈ ಅನ್ಯಾಯವನ್ನು ನಾವು ಪ್ರಶ್ನಿಸುತ್ತಿದ್ದೇವೆ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಕೊಡುವುದಾಗಿ ಹಾಗೂ ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಹೇಳಿದ್ದರು. ಆದರೆ ಹೇಳಿದ್ದ ಅನುದಾನ ಇನ್ನೂ ನೀಡಿಲ್ಲ. ರಾಜ್ಯಕ್ಕೆ 11,495 ಕೋಟಿ ವಿಶೇಷ ಅನುದಾನ ರಾಜ್ಯಕ್ಕೆ ನೀಡಿಲ್ಲ. 15ನೇ ಹಣಕಾಸು ಆಯೋಗದ ಶಿಫಾರಸ್ಸಿನಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲವೆಂದ ಕೇಂದ್ರ ವಿತ್ತಸಚಿವೆ, ಆಯೋಗದ ಶಿಫಾರಸ್ಸನ್ನು ಅಲ್ಲಗೆಳೆದು ರಾಜ್ಯಕ್ಕೆ ನೀಡುವ ಈ ಮೊತ್ತವನ್ನು ನೀಡಲು ನಿರಾಕರಿಸಿದ್ದೇಕೆ? ಕಳೆದ 10 ವರ್ಷಗಳ ಅವಧಿಯಲ್ಲಿ ಕೇಂದ್ರದ ಬಜೆಟ್ ಗಾತ್ರ ಹೆಚ್ಚಾಗಿದ್ದು, ರಾಜ್ಯಕ್ಕೆ ನೀಡುವ ಅನುದಾನದ ಗಾತ್ರವೂ ಹೆಚ್ಚಾಗಬೇಕಾಗಿತ್ತು. ಇದು ರಾಜ್ಯಕ್ಕೆ ಆಗಿರುವ ಅನ್ಯಾಯ. ಈ ವಿಷಯದ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿರುವ ಕರ್ನಾಟಕದ ಬಿಜೆಪಿ ಸಂಸದರು ರಾಜ್ಯದ ಹಿತ ಕಾಯುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

     

    admin
    • Website

    Related Posts

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026

    ಬೆಂಗಳೂರು: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ಅವರ ಭರ್ಜರಿ ಗೆಲುವಿನ ಬಗ್ಗೆ ನಟಿ ಹಾಗೂ ಮಾಜಿ ಸಂಸದೆ ಸುಮಲತಾ…

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026

    ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್

    May 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.