ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಕಿಟಕಿ ಪಕ್ಕದ ಸೀಟ್ ಗಾಗಿ ಹೊಡೆದಾಡಿಕೊಂಡ ಘಟನೆಗಳು ಹಲವೆಡೆ ನಡೆದಿವೆ. ಹಾಗೆಯೇ ಇದೀಗ ಯುವತಿಯರಿಬ್ಬರು ಬಿಎಂಟಿಸಿ ಬಸ್ ನಲ್ಲಿ ಕಿಟಕಿ ತೆರೆಯುವ ವಿಚಾರಕ್ಕೆ ಚಪ್ಪಲಿ, ಶೂನಲ್ಲಿ ಬಡಿದಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮೆಜೆಸ್ಟಿಕ್ ಟು ಪೀಣ್ಯಾ ಬಸ್ ನಲ್ಲಿ ಯುವತಿಯರಿಬ್ಬರು ಚಪ್ಪಲಿಯಲ್ಲಿ ಬಡಿದಾಡಿಕೊಂಡ ಘಟನೆ ವರದಿಯಾಗಿದೆ.
ಮೆಜೆಸ್ಟಿಕ್ ನಿಂದ ಪೀಣ್ಯ ಕಡೆಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಕಿಟಕಿ ತೆಗೆಯುವ ವಿಚಾರಕ್ಕೆ ಇಬ್ಬರು ಯುವತಿಯರು ಮಧ್ಯೆ ಕಿರಿಕ್ ಮಾಡಿಕೊಂಡಿದ್ದಾರೆ. ಈ ವೇಳೆ ಇಬ್ಬರೂ ಚಪ್ಪಲಿ, ಶೂ ನಿಂದ ಪರಸ್ಪರ ಹೊಡೆದಾಡಿಕೊಂಡಿರುವ ವಿಡಿಯೋವನ್ನು ಅಲ್ಲಿದ್ದ ಇನ್ನಿತರ ಪ್ರಯಾಣಿಕರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿಯಲಾಗಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲಾತಣಗಳಲ್ಲಿ ವೈರಲ್ ಆಗುತ್ತಿದೆ.


