ಕುಷ್ಟಗಿ ತಾಲೂಕಿನ ನೆರೆಬೆಂಚಿ ಗ್ರಾಮದಲ್ಲಿ ವೈರಲ್ ಫಿವರ್ ಮತ್ತು ಚಿಕನ್ ಗುನ್ಯಾ ಪ್ರಕರಣಗಳು ಹೆಚ್ಚಾಗುತ್ತಿವೆ. ಇಲ್ಲಿನ ಗ್ರಾಮದ ಜನರು ಜ್ವರ, ಮೈ ಕೈ ನೋವು ಮತ್ತು ಕೀಲು ನೋವಿನಿಂದ ಬಳಲುತ್ತಿದ್ದಾರೆ.
ನೆರೆಬೆಂಚಿ ಗ್ರಾಮ ಮಾತ್ರವಲ್ಲದೇ, ಅನೇಕ ಗ್ರಾಮಗಳಲ್ಲಿ ಚಿಕನ್ ಗುನ್ಯಾ ಆತಂಕ ಹೆಚ್ಚಾಗಿದೆ. ಹೀಗಾಗಿ ಕೊಪ್ಪಳ ಜಿಲ್ಲಾ ಆರೋಗ್ಯ ಇಲಾಖೆ ಜಾಗೃತಿ ಮೂಡಿಸಲು ಮುಂದಾಗಿದೆ. ಯಾವೆಲ್ಲಾ ಕ್ರಮ ಕೈಗೊಳ್ಳಬೇಕು. ಜನರು ಮಾಡಬೇಕಾಗಿರುವುದು ಏನು ಎಂಬುವುದರ ಬಗ್ಗೆ ಮನೆ ಮನೆಗೆ ಹೋಗಿ ಜಾಗೃತಿ ಮೂಡಿಸಲು ಮುಂದಾಗಿದೆ.


