ಮೈಸೂರು: ಮೈಸೂರು ಶ್ರೀರಾಂಪುರದ ಖಾಸಗಿ ಶಾಲೆಯ ದೈಹಿಕ ಶಿಕ್ಷಕ ಉಪೇಂದ್ರ ಕುಮಾರ್ ಎಂಬುವವರಿಂದ, ಸಹ ಶಿಕ್ಷಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.
ದೈಹಿಕ ಶಿಕ್ಷಕ ಉಪೇಂದ್ರ, ತನ್ನ ಜೊತೆ ಕೆಲಸ ಮಾಡುತ್ತಿದ್ದ ಶಿಕ್ಷಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಶಿಕ್ಷಕಿಯರ ಪೋಷಕರು ಶಾಲೆ ಮುಂದೆ ಜಮಾಯಿಸಿ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಆಕ್ರೋಶ ಹೊರ ಹಾಕಿದ್ದರು. ಶಾಲೆ ಮುಂದೆ ಗಲಾಟೆ ನಡೆಯುತ್ತಿದ್ದ ಹಿನ್ನಲೆ ಶಾಲಾ ಆಡಳಿತ ಮಂಡಳಿ ಶಿಕ್ಷಕನನ್ನು ಟರ್ಮಿನೇಟ್ ಮಾಡಿದೆ. ಶಿಕ್ಷಕಿಯರ ಪೋಷಕರು ಶಾಲೆಯಿಂದ ವಾಪಸ್ಸು ತೆರಳಿದ್ದಾರೆ.


