ಚಿಕ್ಕಬಳ್ಳಾಪುರ: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ – ಶ್ರೀನಿವಾಸಪುರ ರಸ್ತೆಯ ಹಂದಿಜೋಗಿಗಡ್ಡೆ ಗೇಟ್ ಬಳಿ ನಡೆದಿದೆ. ಊಲವಾಡಿ ಗ್ರಾಮದ ಮನೋಜ್ ಕುಮಾರ್(24) ಮೃತ ದುರ್ದೈವಿಯಾಗಿದ್ದಾರೆ.
ಮತ್ತೊಬ್ಬ ಸವಾರ ನರಸಿಂಹಮೂರ್ತಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.


