ಹೈದರಾಬಾದ್: ತೆಲಂಗಾಣದ ಸಿಕಂದರಾಬಾದ್ ನಲ್ಲಿ ಆಸ್ತಿ ವಿವಾದದಿಂದಾಗಿ ವ್ಯಕ್ತಿಯೊಬ್ಬ ತನ್ನ ಸಹೋದರನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದೆ.
ಆರೋಪಿಯು ತನ್ನ ಮನೆಗೆ ಹೋಗುವ ಕಿರಿದಾದ ದಾರಿಯಲ್ಲಿ ತನ್ನ ಒಡಹುಟ್ಟಿದ ಸಹೋದರನಿಗೆ ಬೆಂಕಿ ಹಚ್ಚುತ್ತಿರುವುದು ಕಂಡುಬಂದಿದೆ.
ಆರೋಪಿ ಕೊಂಡಿಕೊಂಡ ವಿನೋದ್ ತನ್ನ ನಿವಾಸದ ಬಳಿ ಮಾರ್ಗವನ್ನು ಪ್ರವೇಶಿಸುವ ಬಗ್ಗೆ ಜಗಳ ಉಂಟಾಗಿ ವಿಕೋಪಕ್ಕೆ ತಿರುಗಿದ ವೇಳೆ ಆರೋಪಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.
ವಿನೋದ್ ತನ್ನ ಸಹೋದರ ಕೊಂಡಿಕೊಂಡ ಶ್ರೀನಿವಾಸ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಕ್ಷಣ ಸಮೀಪದ ನಿವಾಸಿಗಳು ಸದ್ಯ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಶ್ರೀನಿವಾಸ್ ತಲೆ ಮತ್ತು ದೇಹಕ್ಕೆ ತೀವ್ರ ಗಾಯಗಳಾಗಿದ್ದು ಅವರನ್ನು ಚಿಕಿತ್ಸೆಗಾಗಿ ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆಗೆ ಸಂಬಂಧಿಸಿಂತೆ ಬೋನಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


