ಮಥುರಾ: ಉತ್ತರ ಪ್ರದೇಶದ ಮಥುರಾದಲ್ಲಿ ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಕಾರು- ಬಸ್ ಡಿಕ್ಕಿಯಾಗಿ ಐವರು ಮೃತಪಟ್ಟ ಘಟನೆ ನಡೆದಿದೆ. ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಕಾರಿನಲ್ಲಿದ್ದ ಐವರು ಸುಟ್ಟು ಕರಕಲಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ ಬಸ್ ಟೈರ್ ಒಡೆದ ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದಿತ್ತು. ಹಿಂದಿನಿಂದ ಬಂದ ಕಾರು ಬಸ್ ಗೆ ಡಿಕ್ಕಿ ಹೊಡೆದು ಎರಡೂ ವಾಹನಗಳು ಬೆಂಕಿಗೆ ಆಹುತಿಯಾಗಿದೆ. ಸಂತ್ರಸ್ತರಲ್ಲಿ ಒಬ್ಬನನ್ನು ಗುರುತಿಸಲಾಗಿದೆ ಮತ್ತು ನಾವು ಇತರ ಪ್ರಯಾಣಿಕರನ್ನು ಗುರುತಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಮಥುರಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶೈಲೇಶ್ ಪಾಂಡೆ ತಿಳಿಸಿದ್ದಾರೆ.
ಮಥುರಾದ ಮಹಾವನಡಾ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ವಾಕುಜ ಬಸ್ ಗೆ ಢಿಕ್ಕಿಯಾಗಿದೆ. ವಾಹನ ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಬೆಂಕಿಗೆ ಆಹುತಿಯಾಗಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ ತಂಡವನ್ನು ಕರೆಸಲಾಯಿತು.


