ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಪುಣ್ಯ ಕ್ಷೇತ್ರವಾದ ಸಿದ್ದರಬೆಟ್ಟದ ಗ್ರಾಮ ಪಂಚಾಯಿತಿ ಆವರಣ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು.
ಬೆಂಗಳೂರು ಮೂಲದ ಆಚಾರ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಸುಮಾರು 17 ವಿದ್ಯಾರ್ಥಿ ವಿದ್ಯಾರ್ಥಿನಿಯರು ಒಂದು ದಿನದ ಶ್ರಮದಾನ ನಡೆಸಿದರು.
ಇದೇ ವೇಳೆ ಬೂದಗವಿ ಗ್ರಾಮ ಪಂಚಾಯಿತಿ ಆಡಳಿತದ ವತಿಯಿಂದ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಅಭಿನಂದನಾ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಎಸ್. ಶ್ರೀನಿವಾಸ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಘು ನಂದನ್, ಕಾರ್ಯದರ್ಶಿ ನರಸಿಂಹಮೂರ್ತಿ, ಬಿಲ್ ಕಲೆಕ್ಟರ್ ಪ್ರಕಾಶ್, ಗ್ರಾಮ ಪಂಚಾಯಿತಿ ಸದಸ್ಯ ರವಿ ಕುಮಾರ್,ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ