ಬೆಂಗಳೂರು: ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಗುರುವಾರ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
2024ರ ತಿದ್ದುಪಡಿ ಮಸೂದೆ ಇದಾಗಿದ್ದು, ವಾಣಿಜ್ಯ, ಕೈಗಾರಿಕೆ, ಉದ್ಯಮ, ಆಸ್ಪತ್ರೆಗಳು, ಪ್ರಯೋಗಾಲಯಗಳು, ಹೋಟೆಲ್ ಗಳು ಸೇರಿದಂತೆ ಎಲ್ಲಾ ನಾಮಫಲಕಗಳಲ್ಲಿಯೂ ಕನ್ನಡ ಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸುವುದು ಕಡ್ಡಾಯವಾಗಲಿದೆ.
ನಾಮಫಲಕಗಳ ಮೇಲ್ಭಾಗದಲ್ಲಿ ಕನ್ನಡವನ್ನು ಪ್ರದರ್ಶಿಸಬೇಕು ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ.
ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯ ನಿಯಮ ಪಾಲಿಸದಿದ್ದಲ್ಲಿ ಉದ್ಯಮಗಳ ಪರವಾನಗಿ ರದ್ದತಿಗೆ ಕಾರಣವಾಗುತ್ತದೆ ಎಂದು ಸರ್ಕಾರ ಸದನದಲ್ಲಿ ಪ್ರತಿಪಾದಿಸಿದೆ.


