ಮುಸ್ಲಿಂ ರಾಷ್ಟ್ರದಲ್ಲಿ ನಿರ್ಮಿಸಲಾಗಿರುವ ಮೊದಲ ಹಿಂದೂ ದೇವಾಲಯವನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಕನ್ನಡದ ಹೆಸರಾಂತ ನಟಿ, ಸಂಸದೆ ಸುಮಲತಾ ಅಂಬರೀಶ್ ಅವರು ಪಾಲ್ಗೊಂಡಿದ್ದರು.
ಅರಬ್ ಸಂಯುಕ್ತ ಸಂಸ್ಥಾನದ(ಯುಎಇ) ಬೋಚಸನವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥಾ ಹಿಂದೂ ದೇವಾಲಯವನ್ನು ನಿರ್ಮಾಣ ಮಾಡಿದೆ.ಈ ವೇಳೆ ಇದರ ಉದ್ಘಾಟನೆ ಕಾರ್ಯಕ್ರಮವನ್ನು ಮೋದಿಯವರು ಮಾಡಿದರು. ಈ ಅದ್ದೂರಿ ಕಾರ್ಯಕ್ರಮದಲ್ಲಿ ನೂರಾರು ಗಣ್ಯರು ಪಾಲ್ಗೊಂಡರು.
ದೇವಾಲಯ ಉದ್ಘಾಟನೆಗೂ ಮುನ್ನ ಮಂದಿರದ ಹೊರಗಡೆ ಕಲ್ಯಾಣಿಗೆ ಗಂಗಾ ಪೂಜೆ ಕಾರ್ಯವನ್ನು ಮೋದಿ ನೆರವೇರಿಸಿದರು. ನಂತರ ಪ್ರವೇಶದ್ವಾರದಲ್ಲಿ ಟೇಪ್ ಕತ್ತರಿಸುವ ಮೂಲಕ ದೇವಾಲಯವನ್ನು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸುಮಲತಾ ಅಂಬರೀಶ್ ಅವರು ಆ ಕ್ಷಣವನ್ನು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಶಾಂತಿ, ಸೌಹಾರ್ದತೆ ಹಾಗೂ ಧಾರ್ಮಿಕ ಸಂಕೇತವಾಗಿರುವ ಅಬುಧಾಬಿಯ ಬೋಚಸನ್ ವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆಯು ನಿರ್ಮಿಸಿರುವ ಬೃಹತ್ ಹಿಂದೂ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲು ಅವಕಾಶ ಸಿಕ್ಕಿದ್ದು ಅತ್ಯಂತ ಹೆಮ್ಮೆ ಮತ್ತು ಭಗವಂತನ ಆಶೀರ್ವಾದವಾಗಿದೆ ಎಂದಿದ್ದಾರೆ.


