ತುಮಕೂರು: ಕಾಮಗಾರಿಗಳಲ್ಲಿ ಗುತ್ತಿಗೆದಾರರಿಂದ ಶೇ.40ರಷ್ಟು ಕಮಿಷನ್ ತೆಗೆದುಕೊಳ್ಳಲಾಗುತ್ತಿದೆ ಎಂಬ ಆರೋಪದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ಸಂಬಂಧ ಮಾತನಾಡಿದ ಅವರು, ಗುತ್ತಿಗೆದಾರರಿಂದ ಶೇ 40ರಷ್ಟು ಕಮಿಷನ್ ತೆಗೆದುಕೊಳ್ಳಲಾಗುತ್ತಿದೆ ಎಂಬ ಆರೋಪದ ಬಗ್ಗೆ ಹಾಲಿ ನ್ಯಾಯಮೂರ್ತಿ ಅಥವಾ ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆ ನಡೆಸಿದರೆ, ಸತ್ಯ ಹೊರ ಬರಲಿದೆ ಎಂದು ಅವರು ಹೇಳಿದರು.
ಕಾಮಗಾರಿಗಳಲ್ಲಿ ಶೇ.40ರಷ್ಟು ಕಮಿಷನ್ ತೆಗೆದುಕೊಳ್ಳಲಾಗುತ್ತಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದವರು ಪ್ರಧಾನಿಗೆ ದೂರು ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿ ಹೇಳಿದ್ದರು. ಜಲಸಂಪನ್ಮೂಲ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಜಲಸಂಪನ್ಮೂಲ ಇಲಾಖೆ ಮೇಲೂ ಕಮಿಷನ್ ಆರೋಪಗಳಿದ್ದು, ಅದೇ ಇಲಾಖೆ ಅಧಿಕಾರಿ ತನಿಖೆ ನಡೆದರೆ ಸತ್ಯ ಹೊರ ಬರುವುದೆ? ಎಂದು ಡಿಕೆಶಿ ಪ್ರಶ್ನಿಸಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700