ರಾಯಚೂರು: ಜಿಲ್ಲೆಯ ಸಿಂಧನೂರು ನಗರದ ಅಂಬೇಡ್ಕರ್ ಹಾಸ್ಟೆಲ್ ನಲ್ಲಿ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ನಡೆದಿದೆ. ಹಿರೇಹುಸೇನಪ್ಪ(18) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯಾಗಿದ್ದಾನೆ.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹಿರೇಹುಸೇನಪ್ಪ ಅಂಬೇಡ್ಕರ್ ಹಾಸ್ಟೆಲ್ ನಲ್ಲಿದ್ದುಕೊಂಡು ಓದುತ್ತಿದ್ದ. ವಸತಿ ನಿಲಯದ ವಾರ್ಡನ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಸೇರಿ ಹಿರೇಹುಸೇನಪ್ಪನ ವಿರುದ್ಧ ಉಳಿದ ವಿದ್ಯಾರ್ಥಿಗಳನ್ನು ಎತ್ತಿಕಟ್ಟಿ ಕಿರುಕುಳ ನೀಡಿ, ಜಾತಿನಿಂದನೆ ಮಾಡುತ್ತಿದ್ದರು. ಎಂಬ ಆರೋಪ ಕೇಳಿ ಬಂದಿದೆ.
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯು ವಸತಿ ನಿಲಯದ ಮೂಲಭೂತ ಸೌಕರ್ಯಗಳ ಬಗ್ಗೆ ಪ್ರಶ್ನಿಸಿದ್ದನು. ಅದಕ್ಕೆ ಆತನಿಗೆ ದೈಹಿಕ ಮತ್ತು ಮಾನಸಿಕವಾಗಿ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಬಂದಿದೆ. ಇದರಿಂದ ಮನನೊಂದು ವಿದ್ಯಾರ್ಥಿ ವಸತಿ ನಿಲಯದ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.


