ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಹ್ರೈಚ್ ನಲ್ಲಿ 50 ವರ್ಷದ ವ್ಯಕ್ತಿಯೊಬ್ಬ ಒಂದು ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದಾನೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಮಗುವನ್ನು ಮೊದಲು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಅದರ ಸ್ಥಿತಿ ಸ್ಥಿರವಾಗಿದ್ದರೂ, ಮಕ್ಕಳ ವೈದ್ಯರಿಂದ ಸಂಪೂರ್ಣ ಪರೀಕ್ಷೆಗಾಗಿ ಲಕ್ನೋಗೆ ಕಳುಹಿಸಲಾಗಿದೆ ಎಂದು ಶುಕ್ಲಾ ಹೇಳಿದರು.
ಘಟನೆಯ ಬಗ್ಗೆ ಮಾಹಿತಿ ಬಂದ ಕೂಡಲೇ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.


