ಪ್ರಾಣಾಪಾಯದಿಂದ ಸ್ಪಲ್ಪದರಲ್ಲಿ ಪಾರಾದ ನಟಿ ರಶ್ಮಿಕಾ ಮಂದಣ್ಣ. ರಶ್ಮಿಕಾ ಮಂದಣ್ಣ ಹಾಗೂ ಶ್ರದ್ಧಾದಾಸ್ ಅವರುಗಳು ಮುಂಬೈ ವಿಮಾನ ನಿಲ್ದಾಣದಿಂದ ಹೈದರಾಬಾದ್ ಗೆ ಪ್ರಯಾಣ ಬೆಳೆಸಿದ್ದರು. ವಿಮಾನ ಟೇಕ್ ಆಫ್ ಆದ ಬಳಿಕ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ವಿಮಾನ ನಿಲ್ದಾಣವನ್ನು ತುರ್ತು ಭೂಸ್ಪರ್ಷ ಮಾಡಲಾಗಿದೆ.
ತಮ್ಮ ಹಾಗೂ ಶ್ರದ್ಧಾದಾಸ್ ರ ಕೆಲವು ಚಿತ್ರಗಳನ್ನು ರಶ್ಮಿಕಾ ಮಂದಣ್ಣ ಹಂಚಿಕೊಂಡಿದ್ದು, ‘ಇಂದು ಹೀಗೆ ಮಾಡಿ ನಾವು ಪ್ರಾಣಾಪಾಯದಿಂದ ಪಾರಾದೆವು’ ಎಂದಿದ್ದಾರೆ ರಶ್ಮಿಕಾ. ತುರ್ತು ಭೂಸ್ಪರ್ಷದ ವೇಳೆ ವಿಮಾನ ಸಿಬ್ಬಂದಿ ನೀಡಿದ ಸೂಚನೆಯಂತೆ, ರಶ್ಮಿಕಾ ಹಾಗೂ ಶ್ರದ್ಧಾ ತಮ್ಮ ಕಾಲುಗಳಿಂದ ಎದುರಿನ ಸೀಟ್ ನ ಹಿಂಬದಿಯನ್ನು ಜೋರಾಗಿ ಒತ್ತಿ ಹಿಡಿದುಕೊಂಡಿದ್ದಾರೆ. ಈ ಚಿತ್ರವನ್ನು ರಶ್ಮಿಕಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ರಶ್ಮಿಕಾ ಮಂದಣ್ಣ ಫ್ರೀಕ್ವೆಂಟ್ ಟ್ರಾವೆಲರ್ ಆಗಿದ್ದಾರೆ. ಹೈದರಾಬಾದ್, ಮುಂಬೈ, ಚೆನ್ನೈ ಹಾಗೂ ಬೆಂಗಳೂರಿಗೆ ಪದೇ ಪದೇ ಓಡಾಡುತ್ತಲೇ ಇರುತ್ತಾರೆ. ಹೈದರಾಬಾದ್ನಲ್ಲಿ ಮನೆ ಹೊಂದಿರುವ ರಶ್ಮಿಕಾ, ಬಾಲಿವುಡ್, ಕಾಲಿವುಡ್ಗಳಲ್ಲಿಯೂ ಕೆಲಸ ಮಾಡುತ್ತಿರುವ ಕಾರಣ ಮುಂಬೈ, ಚೆನ್ನೈಗಳಿಗೆ ಓಡಾಡುತ್ತಿರುತ್ತಾರೆ ಎಂದಿದ್ದಾರೆ.


