ತಿಪಟೂರು: ನಗರದ ಕಲ್ಲೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಇರುವ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ಯಾವುದೇ ಕಾರಣಕ್ಕೂ ಸ್ಥಳಾಂತರಿಸಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಲೋಕೇಶ್ವರ್ ತಿಳಿಸಿದರು.
1968 ಮತ್ತು 69ನೇ ಇಸ್ವಿಯಿಂದಲೂ ಕಲ್ಲೇಶ್ವರ ಸ್ವಾಮಿ ದೇವಸ್ಥಾನದ ಆವರಣದಒಳಭಾಗದ ಒಂದು ಕೊಠಡಿಯಲ್ಲಿ ಅಯ್ಯಪ್ಪ ಸ್ವಾಮಿ ದೇವಸ್ಥಾನವಿತ್ತು. ಅಯ್ಯಪ್ಪ ಸ್ವಾಮಿ ಭಕ್ತರು ಇಲ್ಲಿಯೇ ಭಜನೆ, ಪ್ರತಿದಿನ ಪೂಜೆ ಮಾಡುತ್ತಾರೆ. ಅಲ್ಲದೇ ಅಯ್ಯಪ್ಪ ಸ್ವಾಮಿಗೆ ತೆರಳುವಾಗ ಇಲ್ಲೇ ಇರುಮುಡಿ ಕಟ್ಟಿಕೊಂಡು ಹೊರಡುತ್ತಿದ್ದರು ಎಂದರು.
ಕಲ್ಲೇಶ್ವರ ಸ್ವಾಮಿಗೆ ಸೇರಿದ ಆರುಎಕರೆ ಜಾಗದಲ್ಲಿ ನಾವು ನಾಲ್ಕು ಕುಂಟೆ ಮಾತ್ರ ಕೇಳುತ್ತಿದ್ದೇವೆ. ಆದರೆ ಈ ಜಾಗವನ್ನು ತೆರವುಗೊಳಿಸಲು ಬಿಡುವುದಿಲ್ಲ ಎಂದು ಅನೇಕ ಅಯ್ಯಪ್ಪಸ್ವಾಮಿ ಭಕ್ತರು, ಸಾರ್ವಜನಿಕರು ಯಾವುದೇ ಕಾರಣಕ್ಕೂ ಅಯ್ಯಪ್ಪ ಸ್ವಾಮಿ ಜಾಗವನ್ನು ಸ್ಥಳಾಂತರ ಮಾಡಲು ಬಿಡುವುದಿಲ್ಲವೆಂದು ತಿಳಿಸಿದರು.
ಈ ಸುದ್ದಿಗೋಷ್ಠಿಯಲ್ಲಿ ನಗರಸಭಾ ಮಾಜಿ ಉಪಾಧ್ಯಕ್ಷ ಸೊಪ್ಪು ಗಣೇಶ್, ನಗರ ಸಭಾ ಸದಸ್ಯ ಭಾರತಿ ಅಯ್ಯಪ್ಪ ಸ್ವಾಮಿ, ಸೇವಾ ಭಕ್ತರ ಅಧ್ಯಕ್ಷ ನಾರಾಯಣ ಮೂರ್ತಿ, ಅಯ್ಯಪ್ಪ ಸ್ವಾಮಿ ಹೋರಾಟ ಸಮಿತಿ ಭಕ್ತರು ಭಾಗವಹಿಸಿದ್ದರು.
ವರದಿ: ಆನಂದ್ ತಿಪಟೂರು.


