ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಂಗಿಯ ನಿಶ್ಚಿತಾರ್ಥಕ್ಕೆ ಬಂದಿಲ್ಲವೆಂದು ವ್ಯಕ್ತಿಯೊಬ್ಬ ಆತನ ಪತ್ನಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ದಿವ್ಯಶ್ರೀ (26)ಗೆ ಚಾಕು ಇರಿತಕ್ಕೊಳಗಾದವಳು. ಜಯಪ್ರಕಾಶ್ (32) ಆರೋಪಿ ಪತಿ.
ಪೋಷಕರ ವಿರೋಧವಿದ್ದರೂ, ಜಯಪ್ರಕಾಶ್ ಹಾಗೂ ದಿವ್ಯಶ್ರೀ ಪರಸ್ಪರ ಪ್ರೀತಿಸಿ 2019 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದರು. ಅನಾರೋಗ್ಯ ಹಿನ್ನೆಲೆ ಮನೆಯ ಖರ್ಚೆಲ್ಲ ಪತ್ನಿಯೇ ನೋಡಿಕೊಳ್ಳುತ್ತಿದ್ದರು.
ಈ ಸಂದರ್ಭದಲ್ಲಿ ಪತ್ನಿಗೆ ಅಕ್ರಮ ಸಂಬಂಧ ಇದೆ ಎಂದು ಪ್ರತಿದಿನ ಪತಿ ಗಲಾಟೆ ಮಾಡುತ್ತಿದ್ದ ಪತಿ ಫೋನಿನಲ್ಲಿ ಯಾರದ್ದೊ ಜೊತೆಗೆ ಮಾತನಾಡುತ್ತೀಯಾ ಎಂದು ಹಲ್ಲೆ ಮಾಡುತ್ತಿದ್ದನು. ಈ ಗಲಾಟೆಯ ನಡುವೆಯೇ ದಂಪತಿ ಸುಂಕದಕಟ್ಟೆಗೆ ಶಿಫ್ಟ್ ಆಗಿದ್ದರು. ಇದೀಗ ತಂಗಿಯ ನಿಶ್ಚಿತಾರ್ಥಕ್ಕೆ ಬರ್ಲಿಲ್ಲ ಎಂದು ಜಯಪ್ರಕಾಶ್, ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ.


