ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹತ್ತರವಾಟ ಗ್ರಾಮದಲ್ಲಿ ಕುಡಿದ ಮತ್ತಿನಲ್ಲಿ ಸ್ನೇಹಿತರ ಗಲಾಟೆ ಶುರುವಾಗಿದ್ದು, ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ. ನಿಂಗಪ್ಪಾ ಬುಳ್ಳಾರ (25) ಮೃತ ವ್ಯಕ್ತಿಯಾಗಿದ್ದಾರೆ.
ಕುಡಿಯುವ ನೀರಿನ ಟ್ಯಾಂಕ್ ಕಟ್ಟಡ ಕಾಮಗಾರಿಗೆ ಬಂದಿದ್ದರು. ಕುಡಿದ ಮತ್ತಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಶುರುವಾಗಿದೆ. ಹುಕ್ಕೇರಿ ತಾಲೂಕಿನ ರುಸ್ತಂಪೂರ ಗ್ರಾಮದ ನಿವಾಸಿಯಾಗಿರುವ ನಿಂಗಪ್ಪಾ ಬುಳ್ಳಾರನನ್ನು, ಆತನ ಸ್ನೇಹಿತರೇ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ. ನೋಡನೋಡುತ್ತಲೇ ಗೆಳಯನ ಕೊಂದು ಇಬ್ಬರು ಸ್ನೇಹಿತರು ಪರಾರಿ ಆಗಿದ್ದಾರೆ. ಚಿಕ್ಕೋಡಿ ಪೊಲೀಸರು ಆರೋಪಿಗಳ ಹುಡುಕಾಟದಲ್ಲಿದ್ದಾರೆ.


