ಸಿದ್ದು ಗ್ಯಾರಂಟಿ ಯೋಜನೆಗಳನ್ನು ಮೋದಿ ನಕಲು ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿ ಕೇಂದ್ರದ ಗ್ಯಾರಂಟಿ ಎಂದು ಹೇಳುತ್ತಿದ್ದಾರೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಭಾನುವಾರ ಟೀಕಿಸಿದ್ದಾರೆ.
ಹಲವು ರಾಜ್ಯಗಳು ಸಿಎಂ ಸಿದ್ದರಾಮಯ್ಯನವರ ಆಡಳಿತವನ್ನು ಪ್ರಶಂಸಿಸುತ್ತಿವೆ, ಸಿದ್ದರಾಮಯ್ಯ ಮೋದಿ ಸರ್ಕಾರವನ್ನು ಎದುರಿಸುವ ಏಕೈಕ ನಾಯಕರಾಗಿದ್ದಾರೆ. ಬಡವರ ಉದ್ಧಾರಕ್ಕಾಗಿ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು.


