ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲಿಲ್ಲ. ಎಎಪಿ ಸಮನ್ಸ್ ಕಾನೂನುಬಾಹಿರ ಎಂದು ಹೇಳುತ್ತದೆ ಮತ್ತು ವಿಷಯವು ನ್ಯಾಯಾಲಯದ ಮುಂದೆ ಬಾಕಿ ಇದೆ. ಇಡಿ ಸಮನ್ಸ್ ಗಳನ್ನು ಕೇಜ್ರಿವಾಲ್ ನಿರ್ಲಕ್ಷಿಸಿರುವುದು ಇದು ಆರನೇ ಬಾರಿ.
ಕಳೆದ ಐದು ಬಾರಿ ನೋಟಿಸ್ ಜಾರಿ ಮಾಡಿದ್ದರೂ ಕೇಜ್ರಿವಾಲ್ ಹಾಜರಾಗಿರಲಿಲ್ಲ. ಇದರ ಬೆನ್ನಲ್ಲೇ ಇಡಿ ಇಂದು ಆರನೇ ಬಾರಿಗೆ ಸಮನ್ಸ್ ಜಾರಿ ಮಾಡಿದ್ದು, ಹಾಜರಾಗುವಂತೆ ಸೂಚಿಸಿದೆ. ನೊಟೀಸ್ಗಳನ್ನು ನಿರಂತರವಾಗಿ ಕಡೆಗಣಿಸಿರುವ ಹಿನ್ನೆಲೆಯಲ್ಲಿ ಇಡಿ ಕೇಜ್ರಿವಾಲ್ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದೆ. ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಆದೇಶ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.


