ರಾಯಚೂರು: ರಾಯಚೂರು ನಗರದ ಹರ್ಷಿತಾ ಗಾರ್ಡನ್ ಹೆಸರಿನ ಫಂಕ್ಷನ್ ಹಾಲ್ ನಲ್ಲಿರುವ ಲೇಬರ್ ರೂಂನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ತೀವ್ರತೆಗೆ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಒಂದು ಹಸು ಸುಟ್ಟು ಕರಕಲಾಗಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಲೇಬರ್ ರೂಂನಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಸ್ಟೋರ್ ರೂಂನಲ್ಲಿ ಮೂರು ಸಿಲಿಂಡರ್ ಪೈಕಿ ಒಂದು ಸಿಲಿಂಡರ್ ಬ್ಲಾಸ್ಟ್ ಆಗಿದೆ. ಬಳಿಕ ತೀವ್ರತೆ ಪಡೆದುಕೊಂಡು ಕೊಠಡಿ ಹೊತ್ತಿ ಉರಿದಿದೆ. ಘಟನೆಯಲ್ಲಿ ಲೇಬರ್ ರೂಂ ಬಳಿ ಸಾಕಲಾಗಿದ್ದ ಒಂದು ಹಸು ಸುಟ್ಟು ಕರಕಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಎರಡು ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.


