ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಾಲಕತ್ವದ ರಾಕ್ ಲೈನ್ ಮಾಲ್ ಬೀಗಮುದ್ರೆ ಹಾಕಿದ್ದನ್ನು ತೆರವಿಗೆ ಹೈಕೋರ್ಟ್ ಸೂಚನೆ ನೀಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಇತ್ತೀಚೆಗೆ ರಾಕ್ ಲೈನ್ ಮಾಲ್ ಗೆ ಬೀಗ ಹಾಕಿದ್ದರು. ಇದನ್ನು ಪ್ರಶ್ನಿಸಿ ರಾಕ್ ಲೈನ್ ವೆಂಕಟೇಶ್ ಅವರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಬಿಬಿಎಂಪಿ ಆದೇಶ ಪ್ರಶ್ನಿಸಲು ಪ್ರತ್ಯೇಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಹೀಗಾಗಿ ಅರ್ಜಿದಾರರಿಗೆ ಅವಕಾಶ ನೀಡಿ ರಿಟ್ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಕಾರಣಕ್ಕೆ ಟಿ.ದಾಸರಹಳ್ಳಿಯ ಪ್ರಶಾಂತ್ ನಗರದಲ್ಲಿರುವ ಮಾಲ್ ಗೆ ಅಧಿಕಾರಿಗಳು ಬೀಗ ಹಾಕಿದ್ದರು. 2011 ರಿಂದ 2023ರವರೆಗೆ 11.51 ಕೋಟಿ ರೂಪಾಯಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಕ್ಕೆ ನೋಟಿಸ್ ನೀಡಲಾಗಿತ್ತು.


