ಬೆಂಗಳೂರು: ನಮ್ಮ ಮೆಟ್ರೋ ಯೆಲ್ಲೋ ಮಾರ್ಗದ ಮೊದಲ ಡ್ರೈವರ್ ಲೆಸ್ ಮೆಟ್ರೋದ ಮೊದಲ ಫೋಟೋ ರಿವೀಲ್ ಆಗಿದೆ.
ಚೀನಾ ತಯಾರಿಸಿರುವ ಈ ಮೆಟ್ರೋದ ಬೋಗಿಗಳನ್ನು ಫೆಬ್ರವರಿ 6 ರಂದು ಸಮುದ್ರ ಮಾರ್ಗವಾಗಿ ಚೆನ್ನೈಗೆ, ಬಂದರು ಮೂಲಕ ಲಾರಿಗಳಲ್ಲಿ ಬೆಂಗಳೂರಿಗೆ ತರಲಾಗಿತ್ತು. ಸದ್ಯ ರಾಜ್ಯದ ಮೊದಲ ಡ್ರೈವರ್ ಲೆಸ್ ಮೆಟ್ರೋ ರೈಲು ಸಂಚಾರಕ್ಕೆ ಸಜ್ಜಾಗಿದೆ.
ಆರ್ ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ಈ ಚಾಲಕ ರಹಿತ ಮೆಟ್ರೋ ಓಡಾಡಲಿದ್ದು, ಚೀನಾದಿಂದ ಕೋಚ್ ತರಿಸಲಾಗಿದೆ. ಇನ್ನು ಮೂರು- ನಾಲ್ಕು ತಿಂಗಳ ಕಾಲ ಟೆಸ್ಟಿಂಗ್ ಪ್ರಕ್ರಿಯೆ ನಡೆಯಬೇಕಾಗಿದೆ. ಟ್ರ್ಯಾಕ್ ನಲ್ಲಿ ಸುಮಾರು 15 ಮಾದರಿ ಪರೀಕ್ಷೆಗಳು ನಡೆಯಬೇಕಿದೆ.


