ಸರಗೂರು: ಜಾನುವಾರುಗಳನ್ನು ತೊಳೆಯಲು ಹೋಗಿದ್ದ ವೇಳೆ ರೈತರೊಬ್ಬರು ಕಪಿಲ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಪಟ್ಟಣದ 5 ವಾರ್ಡಿನ ಸೋಮವಾರ ನಡೆದಿದೆ.
ತಾಲ್ಲೂಕಿನ ಹಂಚೀಪುರ ಗ್ರಾ.ಪಂ. ವ್ಯಾಪ್ತಿಯ ಹಳಿಯೂರು ಗ್ರಾಮದ ನಿಲಯ್ಯ (55) ಮೃತ ಪಟ್ಟವರು ಎಂದು ಗುರುತಿಸಲಾಗಿದೆ.
ಜಮೀನಿನಲ್ಲಿ ಉಳುಮೆ ಮಾಡಿ ನಂತರ ಜಾನುವಾರುಗಳಿಗೆ ನೀರು ಕುಡಿಸಿ, ಜಾನುವಾರಗಳ ಮೈ ತೊಳೆದುಕೊಂಡು ಬರಲು ಹೋಗಿದ್ದ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಸಾವನ್ನಪ್ಪಿದ್ದಾರೆ.
ಘಟನೆಯ ಬಳಿಕ ಸ್ಥಳಕ್ಕೆಆಗಮಿಸಿದ ಪೊಲೀಸರು ಹಾಗೂ ಸ್ಥಳೀಯರು ನೀರಿನಿಂದ ಮೃತದೇಹವನ್ನು ಮೇಲೆತ್ತಿದ್ದಾರೆ. ಸರಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತಹದೇವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಘಟನೆ ಸಂಬಂಧ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಚಂದ್ರ ಹಾದನೂರು