ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಪೇಪರ್ ಬಾಕ್ಸ್ ತಯಾರಿಕಾ ಕಾರ್ಖಾನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿರುವ ಘಟನೆ ಗಂಗಮ್ಮನ ಗುಡಿ ವ್ಯಾಪ್ತಿಯಲ್ಲಿ ನಡೆದಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಪೇಪರ್ ಫ್ಯಾಕ್ಟರಿಯಲ್ಲಿ ಅಗ್ನಿ ಅನಾಹುತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಕಾರ್ಖಾನೆಯಲ್ಲಿದ್ದ ಬಾಕ್ಸ್ ಹಾಗೂ ವಸ್ತುಗಳು ಸುಟ್ಟು ಕರಕಲಾಗಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯದ ವರದಿಯಾಗಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಈ ಕುರಿತು ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


