ತೆಲಂಗಾಣ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಇಂತಹ ದುಸ್ಸಾಹಸಕ್ಕೆ ಕೈ ಹಾಕಿದವರು. ನಲ್ಲಗೊಂಡ ಜಿಲ್ಲೆಯ ನಾರ್ಕೆಟ್ ಪಲ್ಲಿ ಮಂಡಲದಲ್ಲಿ ವಾರ್ಷಿಕ ಚೆರುವುಗುತ್ತು ಜಾತ್ರೆಯ ಅಂಗವಾಗಿ ಸಮವಸ್ತ್ರ ಧರಿಸಿದ ಪೊಲೀಸರು ಈ ಕಾರ್ಯದಲ್ಲಿ ಭಾಗವಹಿಸಿದ್ದರು. ಗಮನಾರ್ಹವೆಂದರೆ ಈ ಘಟನೆಗೂ ತನ್ನ ಇಲಾಖೆಗೂ ಯಾವುದೇ ಸಂಬಂಧವಿಲ್ಲ ಎಂದು ತೆಲಂಗಾಣ ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.
ನಲ್ಲಗೊಂಡ ಜಿಲ್ಲೆಯ ಪಾರ್ವತಿ ಜಡೆ ರಾಮಲಿಂಗೇಶ್ವರ ಸ್ವಾಮಿ ಜಾತ್ರೆ ಉತ್ಸವಗಳಲ್ಲಿ ಭಕ್ತರು ಅಗ್ನಿಗುಂಡದ ಮೇಲೆ ನಡೆದುಕೊಂಡು ಹೋಗುವ ಸಂಪ್ರದಾಯವಿದೆ. ಹಲವು ವರ್ಷಗಳಿಂದ ಈ ಕಾರ್ಯಕ್ರಮ ನಡೆಯುತ್ತಿದೆ. ಆದರೆ ಮೌಢ್ಯಾಚರಣೆ ನಿಲ್ಲಿಸಬೇಕಾದ ಪೊಲೀಸರೇ ಸಾಮಾನ್ಯ ಭಕ್ತರ ಜತೆಗೆ ಅಗ್ನಿಕುಂಡದಲ್ಲಿ ಹೆಜ್ಜೆ ಹಾಕುವ ಮೂಲಕ ಚರ್ಚೆಗೆ ಆಸ್ಪದ ನೀಡಿದ್ದಾರೆ. ಈ ಬಗ್ಗೆ ಭಾರಿ ಚರ್ಚೆಗಳು ನಡಿಯುತಿದ್ದು, ಸಮವಸ್ತ್ರ ಧರಿಸಿ ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳೋದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


