ಕೇರಳ: ಭಾರತೀಯ ಕಮ್ಯುನಿಸ್ಟ್ ಪಾರ್ಟಿ ಸ್ಥಳೀಯ ಸಮಿತಿ ಕಾರ್ಯದರ್ಶಿಯನ್ನು ಗುರುವಾರ ತಡರಾತ್ರಿ ದೇವಸ್ಥಾನದ ಆವರಣದ ಬಳಿ ಹತ್ಯೆ ಮಾಡಿದ ಘಟನೆ ಕೋಝಿಕ್ಕೋಡ್ ನಲ್ಲಿ ನಡೆದಿದೆ. ಹತ್ಯೆಗೀಡಾದ ವ್ಯಕ್ತಿಯನ್ನು ಪಿ.ವಿ.ಸತ್ಯನಾಥನ್ ಎಂದು ಗುರುತಿಸಲಾಗಿದೆ.
ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಓರ್ವ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ.
ಪೆರುವತ್ತೂರಿನ ಚೆರಿಯಪುರಂ ದೇವಸ್ಥಾನದಲ್ಲಿ ಉತ್ಸವ ನಡೆಯುತ್ತಿದ್ದು,ಈ ವೇಳೆ ಸಿಪಿಐ(ಎಂ) ನಾಯಕ ಉತ್ಸವಕ್ಕೆ ಏರ್ಪಡಿಸಿದ್ದ ಸಂಗೀತ ಕಾರ್ಯಕ್ರಮವನ್ನು ವೀಕ್ಷಿಸುತ್ತಿದ್ದ ವೇಳೆ ಆರೋಪಿಗಳು ಪಿ.ವಿ.ಸತ್ಯನಾಥನ್ ರವರ ಬೆನ್ನು ಮತ್ತು ಕತ್ತಿನ ಮೇಲೆ ದಾಳಿ ಮಾಡಿದ್ದಾರೆ
ದಾಳಿಯಿಂದ ತೀವ್ರ ಗಾಯಗೊಂಡ ಸತ್ಯನಾಥನ್ ರವರನ್ನು ಕೊಯಿಲಾಂಡಿ ತಾಲೂಕು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರು ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಮೃತದೇಹವನ್ನು ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.
“ಓರ್ವ ಆರೋಪಿಯನ್ನು ಬಂಧಿಸಿ ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು” ಎಂದು ಕೊಯಿಲಾಂಡಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಿಪಿಐ (ಎಂ) ಜಿಲ್ಲಾ ಕಾರ್ಯದರ್ಶಿ ಪಿ ಮೋಹನನ್ ಸುದ್ದಿಗಾರರೊಂದಿಗೆ ಮಾತನಾಡಿ, ಆರೋಪಿಗಳು ಸತ್ಯನಾಥನ್ ಅವರ ಮೇಲೆ ವೈಯಕ್ತಿಕ ದ್ವೇಷ ಇಟ್ಟುಕೊಂಡು ಈ ಬರ್ಬರ ಹತ್ಯೆಮಾಡಿದ್ದಾರೆ ಎಂದು ನಾವು ನಂಬುತ್ತೇವೆ, ಪೊಲೀಸ್ ತನಿಖೆಯಿಂದ ಕೊಲೆಯ ಹಿಂದಿನ ಇತರ ಉದ್ದೇಶಗಳ ಬಗ್ಗೆ ಹೆಚ್ಚಿನ ವಿವರಗಳು ಬಹಿರಂಗಗೊಳ್ಳುತ್ತವೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


