ಭೋಪಾಲ್: ಜೈತಾರಿ ಅರಣ್ಯ ವ್ಯಾಪ್ತಿಯಲ್ಲಿ ಆನೆಯೊಂದು ಬೆಳೆ ನಾಶ ಮಾಡುತ್ತಿದ್ದ ಸಂದರ್ಭದಲ್ಲಿ ಗ್ರಾಮಸ್ಥರು ಓಡಿಸಲು ಮುಂದಾದಾಗ, ಯುವಕನ ಮೇಲೆ ಆನೆ ದಾಳಿ ಮಾಡಿದ ಘಟನೆ ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯಲ್ಲಿ ನಡೆದಿದೆ. ಪರಿಣಾಮ ಗಂಭೀರ ಗಾಯಗೊಂಡು ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನೆ ನಡೆಯುತ್ತಿದ್ದಂತೆಯೇ, ಸಿಟ್ಟಿಗೆದ್ದ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು. ಅಲ್ಲದೇ ಅವರ ವಾಹನಗಳನ್ನು ಜಖಂಗೊಳಿಸಿದರು. ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಸ್ಥಳಕ್ಕೆ ಪೊಲೀಸ್ ಪಡೆಗಳನ್ನು ರವಾನಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


