ತುರುವೇಕೆರೆ: ರಾಜ್ಯದಲ್ಲಿ ರೈತರ ಮಕ್ಕಳಿಗಾಗಿ ಜಾರಿಗೆ ತಂದ ವಿದ್ಯಾಸಿರಿ ಹಾಗೂ ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ಯೋಜನೆಗೆ, ರಾಜ್ಯ ಸರ್ಕಾರದಿಂದ ನೀಡುತ್ತಿದ್ದ 4ಸಾವಿರ ರೂ ಮತ್ತು ಶ್ರಮ ಶಕ್ತಿ ಯೋಜನೆಗಳನ್ನು ರಾಜ್ಯ ಸರ್ಕಾರ ನಿಲ್ಲಿಸಿದೆ. ರೈತರ ಬಗ್ಗೆ ಕಾಳಜಿ ಇಲ್ಲದ ಕೆಟ್ಟ ರಾಜ್ಯ ಸರ್ಕಾರ ಎಂದು ಬಿಜೆಪಿ ರಾಜ್ಯ ರೈತಮೋರ್ಚಾ ಅಧ್ಯಕ್ಷ ಎ.ಎಸ್.ನಡಹಳ್ಳಿ ನೇರ ಆರೋಪ ಮಾಡಿದರು.
ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ ಮುದಿಗೆರೆ ಗ್ರಾಮದಲ್ಲಿ ಏರ್ಪಡಿಸಿದ್ದ ರೈತ ಸಂವಾದ ಕಾರ್ಯಕ್ರಮಕ್ಕೆ ಆಗಮಿಸಿ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರದ ಪಿ.ಎಂ.ಕಿಸಾನ್ ಸನ್ಮಾನ ಯೋಜನೆಯ 6 ಸಾವಿರದ ಜೊತೆಗೆ ರಾಜ್ಯ ಸರಕಾರವೂ 4 ಸಾವಿರ ಸೇರಿಸಿ, ವಾರ್ಷಿಕ 10 ಸಾವಿರ ರೂ ರೈತರ ಖಾತೆಗೆ ನೇರ ವರ್ಗಾವಣೆಯಾಗುವಂತೆ ಮಾಡಿದ್ದರು. ಅತಿ ವೃಷ್ಟಿ, ಅನಾವೃಷ್ಟಿಯಂತಹ ಕಾಲದಲ್ಲಿ ಕೇಂದ್ರದ ಅನುದಾನಕ್ಕೆ ಕಾಯದೆ, ರಾಜ್ಯ ಸರಕಾರವೇ ಎಕರೆಗೆ 10 ಸಾವಿರ ರೂ ಪರಿಹಾರ ನೀಡಿತ್ತು ಆದರೆ ಈಗ ರಾಜ್ಯ ಸರಕಾರದ ಬಳಿ ಎಕರೆಗೆ 2000 ರೂ ಪರಿಹಾರ ನೀಡಿಲ್ಲ, ಇದು ಕೂಡ ಇನ್ನು ಡಿ ಸಿ ಯವರ ಅಕೌಂಟ್ ನಲ್ಲಿ ಇದೆ ರೈತರಿಗೆ ಬಿಡುಗಡೆಯಾಗಿಲ್ಲ. ರಾಜ್ಯದ ಖಜಾನೆ ಗ್ಯಾರಂಟಿ ಯೋಜನೆಗಳಿಂದ ಖಾಲಿಯಾಗಿದೆಯಾವುದೇ ಯೋಜನೆಗಳಿಗೆ ಹಣವಿಲ್ಲ ಎಂದು ಆರೋಪಿಸಿದರು.
ರಾಜ್ಯದಲ್ಲಿ ಕೃಷಿಗೆ ಪೂರಕವಾದ ಹೈನುಗಾರಿಕೆಯಿಂದ ಜನರು ಬದುಕು ಕಟ್ಟಿಕೊಳ್ಳುವಂತೆ ಮಾಡುವ ಉದ್ದೇಶದಿಂದ, ಪ್ರತಿ ಲೀಟರ್ ಹಾಲಿಗೆ 2 ರೂ ಪ್ರೋತ್ಸಾಹಧನವನ್ನು ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದರು. 2018ರಲ್ಲಿ ಅಧಿಕಾರಕ್ಕೆ ಬಂದಾಗ ಅದನ್ನು 5 ರೂಗಳಿಗೆ ಹೆಚ್ಚಿಸಿದ್ದರು. ಆದರೆ ಇಂದಿನ ಸಿದ್ದರಾಮಯ್ಯ ಸರಕಾರ ಕಳೆದ ಮೇ ನಿಂದಲೂ ರೈತರಿಗೆ ಹಾಲಿನ ಪ್ರೋತ್ಸಾಹಧನ ನೀಡಿಲ್ಲ ಸುಮಾರು 715 ಕೋಟಿ ರೂ ಹೈನುಗಾರಿರಿಗೆ ನೀಡಬೇಕಾಗಿರುವ ಬಾಕಿ ಇಟ್ಟುಕೊಂಡಿದೆ ಎಂದರು.
ಗೃಹಲಕ್ಷ್ಮಿಯಿಂದ ಒಬ್ಬರಿಗೆ 24 ಸಾವಿರ ಹಣವನ್ನು ಸರ್ಕಾರ ನೀಡುತ್ತಿದೆ ಆದರೆ ಪ್ರತಿಯೊಬ್ಬರ ತಲೆಯ ಮೇಲೆ ಸಿದ್ದರಾಮಯ್ಯನವರ ರಾಜ್ಯ ಸರ್ಕಾರ 28 ಸಾವಿರ ರೂ ಸಾಲವನ್ನು ಹೊರಿಸಿದೆ ಸಿದ್ದರಾಮಯ್ಯ ನವರು ನಮ್ಮ ರಾಜ್ಯಕ್ಕೆ ಸಾಲ ರಾಮಯ್ಯನವರಾಗಿದ್ದರೆ ಎಂದು ಆರೋಪಿಸಿದರು.
ಕೇಂದ್ರ ಸರಕಾರ ತೆಂಗಿಗೆ 12 ಸಾವಿರ ರೂ ಬೆಂಬಲ ಬೆಲೆ ಘೋಷಿಸಿ ಖರೀದಿಗೆ ಅವಕಾಶ ನೀಡಿದ್ದರೂ ರಾಜ್ಯಸರಕಾರ ಇದುವರೆಗೂ ಒಂದು ನಯಾಪೈಸೆ ನೀಡಿಲ್ಲ. ಬದಲಾಗಿ ಖರೀದಿಯನ್ನು ಸಮರ್ಪಕವಾಗಿ ಮಾಡಿಲ್ಲ ಸರ್ಕಾರ ಗ್ಯಾರಂಟಿ ಮಾನಿಟರಿಂಗ್ ಕಮಿಟಿಗಳನ್ನು ರಚನೆ ಮಾಡಿದೆ ಇದಕ್ಕಾಗಿ ನಮ್ಮ ಸಾವಿರಾರು ಕೋತಿ ತೆರಿಗೆ ಹಣವನ್ನು ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಿ ದುಂದು ವೆಚ್ಚ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತೆಂಗು ಮತ್ತು ಹಾಲಿನ ಉಪ ಉತ್ಪನ್ನಗಳ ಮೌಲ್ಯವರ್ಧನೆಗೆ ಕೈಗಾರಿಕೆಗಳ ಸ್ಥಾಪನೆಗೆ ಒತ್ತಾಯಿಸಲಾಗುವುದು ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಯಲ್ಲಿ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರ ಆದೇಶದಂತೆ ಎಲ್ಲಾ ರಾಜ್ಯಗಳ ರೈತಮೋರ್ಚಾ ಪ್ರತಿನಿಧಿಗಳು ಪ್ರತಿ ಹಳ್ಳಿಗೂ ಭೇಟಿ ನೀಡಿ, ಕೇಂದ್ರ ಸರಕಾರ ರೈತರಿಗಾಗಿ ಜಾರಿಗೆ ತಂದಿರುವ ಯೋಜನೆಗಳ ಮನವರಿಕೆ ಮಾಡಿಕೊಡುವುದರ ಜೊತೆಗೆ, ರಾಜ್ಯ ಸರಕಾರದ ರೈತವಿರೋಧಿ ನೀತಿ ಗಳನ್ನು ಜನರಿಗೆ ತಿಳಿಸುವ ಕೆಲಸ ಕೇಂದ್ರ ಸರ್ಕಾರ ಮಹತ್ವಾಕಾಂಕ್ಷೆಯ ಯೋಜನೆಯಾದ ಜಲ್ ಜೀವನ್ ಮಿಷನ್ ಅನ್ನು ಜಾರಿಗೆ ತಂದಿದೆ ಇದೊಂದು ಉತ್ತಮವಾದ ಯೋಜನೆಯಾಗಿದೆ ಎಂದರು.
ಇಂತಹ ಅನೇಕ ಜನಪರ ಹಾಗೂ ರೈತ ಪರ ಯೋಜನೆಗಳೆ ಕಾರಣ ಯೋಜನೆಗಳನ್ನು ತಂದಿರುವಂತ ಕೀರ್ತಿ ನಮ್ಮ ಪ್ರಧಾನಿ ಮೋದಿಯವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ರೈತಮೋರ್ಚಾ ಉಪಾಧ್ಯಕ್ಷ ಬ್ಯಾಟರಂಗೇಗೌಡ,ಮಾಜಿ ಶಾಸಕರಾದ ಲಕ್ಷ್ಮೀನಾರಾಯಣ್, ರಾಜ್ಯ ವಕ್ತಾರರಾದ ಚಂದ್ರಶೇಖರ್, ಜಿಲ್ಲಾ ಬಿ.ಜೆ.ಪಿ ಉಪಾಧ್ಯಕ್ಷೆ ಅನಿತಾ ನಂಜುಂಡಯ್ಯ, ಡಿ.ಆರ್. ಬಸವರಾಜು,ದುಂಡ ರೇಣುಕಯ್ಯ ,ಕೆಂಪೇಗೌಡ ,ನಾರಾಯಣ್, ಪ್ರಕಾಶ್ ಯಾದವ್, ಶಿವಶಂಕರ್, ಹಾಲೇಗೌಡ, ಸೋಮೇನಹಳ್ಳಿ ಜಗದೀಶ್. ಮರಾಠಿಪಾಳ್ಯ ಚಂದ್ರೇಶ್, ರಹಮತ್ ಮಾಯಸಂದ್ರ,ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ: ಸುರೇಶ್ ಬಾಬು ಎಂ, ತುರುವೇಕೆರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


