ಬೆಲೆ ಏರಿಕೆಯಾಗುತ್ತಿರುವಂತೆಯೇ ಬೆಳ್ಳುಳ್ಳು ಬೆಳೆದ ರೈತರು ಒಂದೆಡೆ ಖುಷಿ ಪಟ್ಟರೇ ಮತ್ತೊಂದೆಡೆ ಆತಂಕ ಪಡುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿಯ ಬೆಲೆ ಕೆಜಿಗೆ 300, 400 ರೂಪಾಯಿಯಿಂದ 500 ರೂಪಾಯಿಗೆ ತಲುಪಿದ್ದು ರೈತರು ಉತ್ತಮ ಆದಾಯ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೆ ಬೆಳೆ ಕಳ್ಳತನವಾಗುವ ಭಯ ಕೂಡ ಅನೇಕ ರೈತರಲ್ಲಿ ಕಾಣುತ್ತಿದೆ. ಇದೇ ಕಾರಣಕ್ಕೆ ಮಧ್ಯಪ್ರದೇಶದ ರೈತರೊಬ್ಬರು ತಮ್ಮ ಹೊಲಕ್ಕೆ ಸಂಪೂರ್ಣವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ.
ಮಧ್ಯಪ್ರದೇಶದ ರೈತ ರಾಹುಲ್ ದೇಶಮುಖ್ ತಮ್ಮ 13 ಎಕರೆ ಹೊಲದಲ್ಲಿ ಬೆಳ್ಳುಳ್ಳಿ ಬೆಳೆಯಲು 25 ಲಕ್ಷ ರೂಪಾಯಿ ಹೂಡಿಕೆ ಮಾಡಿದ್ದಾರೆ. ಮಾರುಕಟ್ಟೆಯಲ್ಲಿ ಈಗಾಗಲೇ ಬೆಳ್ಳುಳ್ಳಿ ಮಾರಾಟದಿಂದ ಸುಮಾರು 1 ಕೋಟಿ ರೂಪಾಯಿಗಳ ಗಮನಾರ್ಹ ಲಾಭವನ್ನು ಪಡೆದಿದ್ದಾರೆ. ಹೀಗಾಗಿಯೇ ತಮ್ಮ ತಮ್ಮ ಬೆಳೆಯನ್ನು ರಕ್ಷಿಸಲು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ.
ತಮ್ಮ ಹೊಲದಲ್ಲಿ ರಾಹುಲ್ ದೇಶಮುಖ್ ಸೌರಶಕ್ತಿಯನ್ನು ಬಳಸಿಕೊಳ್ಳುವುದು ಮತ್ತು ಮೊಬೈಲ್ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದರ ಮೂಲಕ ತಮ್ಮ ಬೆಳೆಗಳನ್ನು ರಕ್ಷಿಸಿಕೊಳ್ಳುತ್ತಿದ್ದಾರೆ ಎಂದು ವರದಿ ತಿಳಿಸಿದೆ. ಸಾಮಾನ್ಯವಾಗಿ ಪ್ರತಿ ವರ್ಷ ಕೆ.ಜಿ.ಗೆ 80 ರೂ.ಗೆ ಮಾರಾಟವಾಗುತ್ತಿದ್ದ ಬೆಳ್ಳುಳ್ಳಿ ಈ ಋತುವಿನಲ್ಲಿ ಕೆಜಿಗೆ 300 ರೂಪಾಯಿಗಿಂತ ಹೆಚ್ಚು ಬೆಲೆ ಏರಿಕೆ ಕಂಡಿದೆ. ಬೆಲೆ ಏರಿಕೆಗೆ ಪ್ರಾಥಮಿಕ ಕಾರಣವೆಂದರೆ ಉತ್ಪಾದನೆ ಕಡಿಮೆಯಾಗಿರುವುದು. ಅಕ್ಟೋಬರ್ ಮತ್ತು ನವೆಂಬರ್ ನಲ್ಲಿ ಹಲವಾರು ರಾಜ್ಯಗಳಲ್ಲಿ ಅಕಾಲಿಕ ಮಳೆಯಾಗಿದ್ದು ಕೂಡ ಬೆಲೆ ಏರಿಕೆಗೆ ಕಾರಣವಾಗಿದೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


