ಮಣಿಪುರದಲ್ಲಿ ಮತ್ತೆ ಸಂಘರ್ಷ. ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಐಇಡಿ ಸ್ಫೋಟದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ತಂಗಮೈಬಂದ್ ನ ಡಿಎಂ ಕಾಲೇಜು ಆವರಣದಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.
ಶುಕ್ರವಾರ ರಾತ್ರಿ 9.20ರ ಸುಮಾರಿಗೆ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಡಿಎಂ ಕಾಲೇಜು ಕ್ಯಾಂಪಸ್ ನಲ್ಲಿರುವ ಎಎಂಎಸ್ ಯು ಕಚೇರಿಯಲ್ಲಿ ಸ್ಫೋಟ ಸಂಭವಿಸಿದೆ. ಓಯಿನಮ್ ಕೆನೆಜಿ ಎಂಬ 24 ವರ್ಷದ ವ್ಯಕ್ತಿ ಹತ್ಯೆಗೀಡಾದ. ಗಾಯಗೊಂಡ ಓಯಿನಮ್ ಕೆನೆಜಿ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ.
ಗಂಭೀರವಾಗಿ ಗಾಯಗೊಂಡಿರುವ ಇನ್ನಿಬ್ಬರು ರಾಜ್ ಮೆಡಿಸಿಟಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಫೋಟದ ಹೊಣೆಯನ್ನು ಇನ್ನೂ ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ಮಣಿಪುರ ಪೊಲೀಸರು ಮತ್ತು ಅರೆಸೇನಾ ಪಡೆಗಳು ಪ್ರದೇಶವನ್ನು ಸುತ್ತುವರೆದಿದ್ದು, ಶೋಧವನ್ನು ಪ್ರಾರಂಭಿಸಿದವು. ಸ್ಫೋಟದ ಕಾರಣ ಮತ್ತು ಅದರ ಹಿಂದೆ ಇರುವವರ ಪತ್ತೆಗೆ ಪೊಲೀಸರು ಪ್ರಯತ್ನಿಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


