ಯುವ ಕ್ರಿಕೆಟಿಗರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ದುರ್ಘಟನೆ ನಡೆದಿದೆ. ಕೆ.ಹೊಯ್ಸಳ ಹೃದಯಘಾತಕ್ಕೆ ಬಲಿಯಾದ ದುರ್ದೈವಿ ಯುವ ಕ್ರಿಕೆಟಿಗರಾಗಿದ್ದಾರೆ.
ವರದಿ ಪ್ರಕಾರ ಪ್ರಸ್ತುತ ನಡೆಯುತ್ತಿರುವ ಏಜಿಸ್ ಸೌತ್ ಝೋನ್ ಟೂರ್ನಿಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ತಮಿಳುನಾಡು ತಂಡವನ್ನು ಮಣಿಸುವಲ್ಲಿ ಕರ್ನಾಟಕ ತಂಡ ಯಶಸ್ವಿಯಾಗಿತ್ತು.
ಈ ವೇಳೆ ತಂಡದೊಂದಿಗೆ ಸಂಭ್ರಮಾಚರಣೆ ಮಾಡಿದ್ದ ಹೊಯ್ಸಳಗೆ ಮೈದಾನದಲ್ಲೇ ಎದೆಯಲ್ಲಿ ನೋವು ಕಾಣಿಸಿಕೊಂಡು ಪ್ರಜ್ಞೆ ತಪ್ಪಿದ್ದಾರೆ. ಬಳಿಕ ಆಂಬ್ಯುಲೆನ್ಸ್ ಮೂಲಕ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲಾಯಿತಾದರೂ ಆಸ್ಪತ್ರೆಗೆ ತಲುಪುವಷ್ಟರಲೇ ಹೊಯ್ಸಳ ಅವರ ಪ್ರಾಣಪಕ್ಷಿ ಹಾರಿ ಹೋಗಿದೆ. ಫೆಬ್ರವರಿ 22 ನೇ ಗುರುವಾರದಂದು ಈ ಘಟನೆ ನಡೆದಿದ್ದು, ಫೆಬ್ರವರಿ 23 ರ ಸಂಜೆಯಂದು ಬೆಳಕಿಗೆ ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


