ಚಾಮರಾಜನಗರ: ಚಾಮರಾಜನಗರದ ಜನ್ನೂರು ಗ್ರಾಮದಲ್ಲಿ ಮಾವನೊಬ್ಬ ಅಳಿಯನನ್ನೇ ಕೊಚ್ಚಿ ಕೊಲೆಗೈದಿರುವ ಘಟನೆ ನಡೆದಿದೆ. ಉಮೇಶ್(28) ಹತ್ಯೆಯಾದವನು. ಮಾವ ನಂಜುಂಡಯ್ಯ ಆರೋಪಿ ಆಗಿದ್ದಾರೆ.
ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅಳಿಯ ನಿತ್ಯ ಕುಡಿದು ಬಂದು ನಂಜುಂಡಯ್ಯರ ಮಗಳಿಗೆ ತೊಂದರೆ ಕೊಡುತ್ತಿದ್ದ. ಕುಡಿತವನ್ನೇ ಚಟವನ್ನಾಗಿಸಿಕೊಂಡಿದ್ದ ಉಮೇಶ್ ದುಡಿದ ದುಡ್ಡನ್ನೆಲ್ಲ ಕುಡಿತಕ್ಕೆ ಹಾಕುತ್ತಿದ್ದ. ಇದಲ್ಲದೇ ಕುಡಿದು ಬಂದು ಪತ್ನಿಗೆ ಕಿರುಕುಳ ಮಾಡುತ್ತಿದ್ದ.
ಇದರಿಂದ ಬೇಸತ್ತು ಅಳಿಯನನ್ನು ಕೊಡಲಿಯಿಂದ ಕೊಚ್ಚಿ ನಂಜುಂಡಯ್ಯ ಕೊಲೆ ಮಾಡಿದ್ದಾರೆ. ಉಮೇಶ್ ಮುಖಕ್ಕೆ ಕೊಡಲಿಯಿಂದ ಕೊಚ್ಚಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕುದೇರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿಲಾಗಿದ್ದು, ಮಾವ ನಂಜುಂಡಯ್ಯನನ್ನು ಬಂಧಿಸಿ ವಿಚಾರಣೆಯನ್ನು ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


