ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಆರಂಭದಿಂದಲೂ ಸರ್ಕಾರದ 5 ಗ್ಯಾರಂಟಿಗಳನ್ನು ಲೇವಡಿ ಮಾಡಿಕೊಂಡು ಬಂದಿದ್ದ ಬಿಜೆಪಿಗೆ ಯಾವುದಾದರೂ ಹೊಸ ಅಸ್ತ್ರ ಸಿಗುತ್ತಾ ಅನ್ನೋದನ್ನು ಕಾಯುತ್ತಲೇ ಇದೆ. ಇದೀಗ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದ್ದಾರೆ.
ರಾಜ್ಯ ಸರ್ಕಾರಕ್ಕೆ ಸರ್ಕಾರಿ ನೌಕರರಿಗೂ ಸಂಬಳ ಕೊಡಲು ಕಷ್ಟವಾಗುವ ಸ್ಥಿತಿ ಬಂದಿದೆ. ಶ್ರೀಮಂತ ದೇವಾಲಯಕ್ಕೆ ಸರಕಾರ ಕನ್ನ ಹಾಕಲು ಮುಂದಾಗಿದೆ. ದೇವಾಲಯಕ್ಕೆ ಕನ್ನ ಹಾಕುವ ಬದಲು ವಿಧಾನಸೌಧದ ಮುಂದೆ ಒಂದು ಹುಂಡಿ ಇಟ್ಟು ಬಿಡಿ. ದಾನಿಗಳು ಅಲ್ಲೇ ಬಂದು ದಾನ ಮಾಡುತ್ತಾರೆ ಎಂದು ಟೀಕಿಸಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು 224 ಕ್ಷೇತ್ರಕ್ಕೆ ಒಂದೇ ಒಂದು ರೂಪಾಯಿ ಅನುದಾನವನ್ನೂ ಸರ್ಕಾರ ಬಿಡುಗಡೆ ಮಾಡಿಲ್ಲ. ಈ ಸರ್ಕಾರದ ದುರಾಡಳಿತದಿಂದಾಗಿ ಸರ್ಕಾರಿ ನೌಕರರಿಗೆ ಸಂಬಳವನ್ನೂ ಕೊಡಲು ಕಷ್ಟವಾಗುವ ಸ್ಥಿತಿ ಬಂದಿದೆ. ರಾಜ್ಯದ ಹಣೆಬರಹ ಏನಾಗುತ್ತಿದೆ ನೋಡಿ ಎಂದು ಆರೋಪಿಸಿದ್ದಾರೆ.


