ಪಾಟ್ನಾ: ಬಿಹಾರದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬಿಹಾರದ ಕೈಮೂರ್ ನಲ್ಲಿ ಟ್ರಕ್, ಜೀಪ್ ಮತ್ತು ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಂಬತ್ತು ಜನ ಸಾವನ್ನಪ್ಪಿದ ಘಟನೆ ನಡೆದಿದೆ.
ಜೀಪ್ ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 8 ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ಅದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಬೈಕ್‍ಗೆ ಜೀಪ್ ಡಿಕ್ಕಿ ಹೊಡೆದಿದೆ. ಬಳಿಕ ಎದುರಿನಿಂದ ಬರುತ್ತಿದ್ದ ಟ್ರಕ್ ಬೈಕ್ ಮತ್ತು ಟ್ರಕ್‍ಗೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಹಾಗೂ ಜೀಪ್ ನಲ್ಲಿದ್ದ 8 ಜನ ಸೇರಿದಂತೆ 9 ಮಂದಿ ಸಾವನ್ನಪ್ಪಿದ್ದಾರೆ.
ಅಪಘಾತದ ಬಳಿಕ ಟ್ರಕ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಟ್ರಕ್‍ನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಅಪಘಾತದಲ್ಲಿ ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಬಗ್ಗೆ ಬಿಹಾರ ಸಿಎಂ ನಿತೀಶ್ ಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


