ಬೆಂಗಳೂರು ಗ್ರಾಮಾಂತರ ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಟೋಲ್ ಬಳಿ ಬೈಕ್ ವ್ಹೀಲಿಂಗ್ ಹುಚ್ಚಾಟಕ್ಕೆ ಓರ್ವ ಯುವಕ ಬಲಿಯಾಗಿದ್ದಾನೆ. ದಾಸರಹಳ್ಳಿಯ ರಾಜೀಶ್(18) ಮೃತ ದುರ್ದೈವಿ.
ವ್ಹೀಲಿಂಗ್ ವೇಳೆ ಎರಡು ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.
ವ್ಹೀಲಿಂಗ್ ಬೈಕ್ ನಲ್ಲಿದ್ದ ಮತ್ತೊಬ್ಬ ಸೊಹೈಲ್ ಗೆ ಗಂಭೀರ ಗಾಯಗಳಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಂದು ಬೈಕ್ನ ಕೆಂಪರಾಜು, ತರುಣ್ ಗೂ ಚಿಕಿತ್ಸೆ ನೀಡಲಾಗುತ್ತಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


