ಬೆಂಗಳೂರು: ಕೆಂಗೇರಿಯ ಬಳಿಯಿರುವ ಹೊಯ್ಸಳ ವೃತ್ತದಲ್ಲಿ ಕಾಟನ್ ಉಡುಪುಗಳ ಮಳಿಗೆಯ ಶೆಡ್ ಗೆ ಬೆಂಕಿ ಬಿದ್ದು ಬಟ್ಟೆ ಮತ್ತಿತರ ವಸ್ತುಗಳು ಸುಟ್ಟು ಬೂದಿಯಾಗಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಯಾವುದೇ ಪ್ರಾಣಾಪಾಯ, ಗಾಯಗಳು ಸಂಭವಿಸಿಲ್ಲ.
ರಸ್ತೆಯ ಬದಿಯಲ್ಲಿ ಒಣಗಿದ ಎಲೆಗಳನ್ನು ಒಟ್ಟುಗೂಡಿಸಿ ಬೆಂಕಿಯಿಟ್ಟಿದ್ದೇ ಈ ಅನಾಹುತಕ್ಕೆ ಕಾರಣವೆನ್ನಲಾಗಿದೆ. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ಯಶಸ್ವಿಯಾದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


