ತುಮಕೂರು: ಪಾವಗಡ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ ವಿವಿಧ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ 7 ಮಂದಿ ಮಹಿಳೆಯರ ಪೈಕಿ ಮೂವರು ಮಹಿಳೆಯರು ಮೃತಪಟ್ಟಿರುವ ಘಟನೆ ನಡೆದಿದೆ.
ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್ ಹೆರಿಗೆ ಒಳಗಾಗಿದ್ದ ಮೂವರು ಮಹಿಳೆಯರು. ಐದು ದಿನಗಳ ಅವಧಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ.
ಫೆಬ್ರವರಿ 22 ನೇ ತಾರೀಕು 7 ಮಂದಿಗೆ ಹೆರಿಗೆ ಸೇರಿದ್ದಂತೆ ವಿವಿಧ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಸಂತಾನ ಹರಣ ಚಿಕಿತ್ಸೆಗೆ ಒಳಗಾಗಿದ್ದ ವೀರ್ಲಗೊಂದಿ ಗ್ರಾಮದ ಮಹಿಳೆ 30 ವರ್ಷದ ಅನಿತಾ ಸಂತಾನ ಹರಣ ಚಿಕಿತ್ಸೆ ನಡೆದ ದಿನವೇ ಸಾವನ್ನಪ್ಪಿದ್ದರೆ. ರಾಜವಂತಿ ಮೂಲದ ಅಂಜಲಿಗೆ ಸಿಸರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಹೆರಿಗೆ ಬಳಿಕ ಅಂಜಲಿ ಸ್ಥಿತಿ ಗಂಭೀರವಾಗಿತ್ತು.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಅಂಜಲಿಯನ್ನ ರವಾನಿಸಲಾಗಿತ್ತು. ಚಿಲಿತ್ಸೆ ಫಲಕಾರಿಯಾಗದೆ ಅಂಜಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಫೆಬ್ರವರಿ 24 ರಂದು ಮೃತಪಟ್ಟಿದ್ದಾರೆ. ಬ್ಯಾಡನೂರು ಗ್ರಾಮದ 40 ವರ್ಷದ ನರಸಮ್ಮಗೆ ಗರ್ಭಕೋಶದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಶಸ್ತ್ರ ಚಿಕಿತ್ಸೆ ಬಳಿಕ ನರಸಮ್ಮ ಸ್ಥಿತಿ ಗಂಭೀರವಾಗಿತ್ತು. ನರಸಮ್ಮ ನನ್ನ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಫೆಬ್ರವರಿ 25ನೇ ತಾರೀಕು ನರಸಮ್ಮ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಈ ಮೂವರು ಫೆಬ್ರವರಿ 22ನೇ ತಾರೀಕು ಶಸ್ತ್ರ ಚಿಕಿತ್ಸೆ ಒಳಗಾಗಿದ್ದರು. ಈ ಮೂರು ಸಾವಿಗೆ ನ್ಯಾಯ ಒದಗಿಸುವಂತೆ ಇಂದುಅಂಜಲಿ ಕುಟುಂಬಸ್ಥರಿಂದ ಪಾವಗಡದಲ್ಲಿ ಪ್ರತಿಭಟನೆ ನಡೆಸಲಾಯಿತು. ಮೃತ ಅಂಜಲಿ ಭಾವಚಿತ್ರ ಹಿಡಿದು ಪಾವಗಡ- ಬಳ್ಳಾರಿ ರಸ್ತೆ ತಡೆದು ಪ್ರತಿಭಟನೆ ಮಾಡಲಾಯಿತು. ಈ ಎಲ್ಲಾ ಶಸ್ತ್ರ ಚಿಕಿತ್ಸೆಯನ್ನು ಡಾ. ಪೂಜಾ ನಡೆಸಿದ್ದರು. 7 ಜನರಲ್ಲಿ ಉಳಿದ ನಾಲ್ವರು ಆರೋಗ್ಯವಾಗಿದ್ದಾರೆ.