ನಿಂತಿದ್ದ ಎತ್ತಿನ ಬಂಡಿಗೆ, ಬೈಕ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಹೊಸ ದರೋಜಿ ಗ್ರಾಮದ ಬಳಿ ಅಪಘಾತ ನಡೆದಿದೆ. ಒಂದೇ ಬೈಕ್‌ನಲ್ಲಿ ಐದು ಜನರು ಪ್ರಯಾಣಿಸ್ತಿದ್ದರು ಎನ್ನಲಾಗಿದೆ.
ಬೈಕ್ ನಲ್ಲಿದ್ದ ಜಂಬುನಾಥ್ ಹಳ್ಳಿಯ ವೆಂಕಟೇಶ, ಹೊಸಪೇಟೆಯ ಅಖಿಲಾ, ಆಶಾ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ನಾಲ್ಕು ವರ್ಷದ ಸರಸ್ವತಿ ಮತ್ತು ಜಂಬಕ್ಕ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಕುಡುತಿನಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


